ಸಂಗ್ರಹ ಚಿತ್ರ 
ರಾಜಕೀಯ

ಕೆಆರ್ ಪೇಟೆಯಲ್ಲಿ ಮುಂಬೈನ ಕಾಮಾಟಿಪುರ: ವಿವಾದದ ಕಿಡಿ ಹೊತ್ತಿಸಿದ ಡಿಸಿ ತಮ್ಮಣ್ಣ ಹೇಳಿಕೆ!

ಉಪ ಚುನಾವಣೆ ರಣಕಣ ದಿನಕಳೆದಂತೆ ರಂಗೇರುತ್ತಿದ್ದು, ಜಿದ್ದಿಗೆ ಬಿದ್ದವರಂತೆ ಮೂರೂ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿಯಲ್ಲಿ ಮುಳುಗಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಡಿಸಿ ತಮಣ್ಣ..

ಮಂಡ್ಯ: ಉಪ ಚುನಾವಣೆ ರಣಕಣ ದಿನಕಳೆದಂತೆ ರಂಗೇರುತ್ತಿದ್ದು, ಜಿದ್ದಿಗೆ ಬಿದ್ದವರಂತೆ ಮೂರೂ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿಯಲ್ಲಿ ಮುಳುಗಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಡಿಸಿ ತಮಣ್ಣ..

ಹೌದು.. ಮಂಡ್ಯದ ಕೆಆರ್ ಪೇಟೆ ಕ್ಷೇತ್ರದಲ್ಲಿನ ಉಪ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಡಿಸಿ ತಮಣ್ಣ ವಿವಾದಾತ್ಮಕ ಹೇಳಿಕೆ ನೀಡಿ ಇದೀಗ ಸುದ್ದಿಗೆ ಗ್ರಾಸವಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ವಿರುದ್ಧ ಮಾತಿನ ಚಾಟಿ ಬೀಸೋ ಭರದಲ್ಲಿ ರೆಡ್‍ಲೈಟ್ ಏರಿಯಾದ ಪ್ರಸ್ತಾಪ ಕೆಆರ್‌ಪೇಟೆ ಉಪಕಣದಲ್ಲಿ ಕಿಡಿ ಹತ್ತಿಸಿದ್ದಾರೆ.

ಹೌದು. ಕೆರ್ ಪೇಟೆಯ ಕಿಕ್ಕೇರಿಯಲ್ಲಿ ನಿನ್ನೆ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಸಚಿವ ಡಿ.ಸಿ ತಮ್ಮಣ್ಣ ಬಿಜೆಪಿ ಅಭ್ಯರ್ಥಿ ವಿರುದ್ಧ ವಾಗ್ದಾಳಿ ಮಾಡೋ ಭರದಲ್ಲಿ ರೆಡ್‍ಲೈಟ್ ಏರಿಯಾದ ಪ್ರಸ್ತಾಪ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಅವರನ್ನು ಒಂದು ವೇಳೆ ಗೆಲ್ಲಿಸಿದರೆ, ಕೆಆರ್‌ಪೇಟೆಯನ್ನ ಮುಂಬೈಯ ರೆಡ್‍ಲೈಟ್ ಏರಿಯಾ ಕಾಮಾಟಿಪುರವನ್ನಾಗಿ ಮಾಡುತ್ತಾರೆ ಎಂದು ಹೇಳಿದ್ದಾರೆ.

ಡಿಸಿ ತಮ್ಮಣ್ಣ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಂದೆ ಖಾನ್ ಚಂದ್ ನಿಧನ: ಜಿಂಬಾಬ್ವೆ ವಿರುದ್ಧ ಗೆದ್ದ ಖುಷಿಯಲ್ಲಿದ್ದ ರಿಂಕು ಸಿಂಗ್ ಗೆ ಆಘಾತ!

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಕುಣಿಗಲ್ ನಿವಾಸಿಗಳ ದಾರುಣ ಸಾವು

SCROLL FOR NEXT