ರಾಜಕೀಯ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಕಣಕ್ಕಿಳಿಸಲು ಚಿಂತನೆ

Lingaraj Badiger

ಬೆಂಗಳೂರು: ರಾಜ್ಯಸಭಾ ಸದಸ್ಯರಾಗಿದ್ದ ಕೆ.ಸಿ.ರಾಮಮೂರ್ತಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚಿಂತನೆ ನಡೆದಿದೆ.

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ರಾಮಮೂರ್ತಿ ಆಯ್ಕೆಯಾಗಿದ್ದರು. ರಾಜ್ಯ ವಿಧಾನಸಭೆಯಲ್ಲಿ ಹಾಲಿ ಸದಸ್ಯ ಬಲದ ಆಧಾರದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಅನಾಯಾಸವಾಗಿ ಗೆಲುವು ಸಾಧಿಸಲು ಅವಕಾಶವಿದೆ. ಆದರೆ, 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವುದರಿಂದ ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯುವುದಕ್ಕಿಂತಲೂ ಮುಂಚೆಯೇ ಉಪ ಚುನಾವಣೆಯ ಫಲಿತಾಂಶ ಬರುವುದರಿಂದ ಬಿಜೆಪಿ ಕನಿಷ್ಠ 5 ಕ್ಕಿಂತ ಕಡಿಮೆ ಸ್ಥಾನ ಪಡೆದರೆ ರಾಜ್ಯಸಭೆ ಚುನಾವಣೆಯಲ್ಲಿಯೂ ಜೆಡಿಎಸ್ ಬೆಂಬಲದೊಂದಿಗೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಬಹುದು ಎನ್ನುವ ಲೆಕ್ಕಾಚಾರ ಕಾಂಗ್ರೆಸ್ ಹಾಕುತ್ತಿದೆ ಎಂದು ತಿಳಿದು ಬಂದಿದೆ.

ಒಂದು ವೇಳೆ ಬಿಜೆಪಿ ಕನಿಷ್ಠ 5ಕ್ಕಿಂತ ಕಡಿಮೆ ಸ್ಥಾನ ಪಡೆದರೆ, ರಾಜ್ಯದಲ್ಲಿ ಜೆಡಿಎಸ್ ಜೊತೆಗೆ ಮತ್ತೆ ಮೈತ್ರಿ ಸರ್ಕಾರ ರಚನೆಗೆ ಈ ಬೆಳವಣಿಗೆ ಪೂರಕವೂ ಆಗುತ್ತದೆ ಎಂಬ ಲೆಕ್ಕಾಚಾರ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ನಡೆದಿದೆ ಎನ್ನಲಾಗುತ್ತಿದೆ.

SCROLL FOR NEXT