ಎಚ್.ಡಿದೇವೇಗೌಡ 
ರಾಜಕೀಯ

ತುಮಕೂರಿನ ಸೋಲನ್ನು ಕೆ.ಆರ್ ಪೇಟೆ ಗೆಲುವಿನಲ್ಲಿ ಮರೆಯುತ್ತೇನೆ: ಎಚ್.ಡಿ ದೇವೇಗೌಡ

ಡಿಸೆಂಬರ್ 5 ರಂದು ನಡೆಯುವ ಉಪಚುನಾವಣೆ ಹಿನ್ನೆಲೆಯಲ್ಲಿ ಕೆ.ಆರ್ ಪೇಟೆ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಪರವಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪ್ರಚಾರ ನಡೆಸಿದರು.

ಮೈಸೂರು: ಡಿಸೆಂಬರ್ 5 ರಂದು ನಡೆಯುವ ಉಪಚುನಾವಣೆ ಹಿನ್ನೆಲೆಯಲ್ಲಿ ಕೆ.ಆರ್ ಪೇಟೆ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಪರವಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪ್ರಚಾರ ನಡೆಸಿದರು.

ಈ ವೇಳೆ ಭಾವುಕವರಾಗಿ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರಿನಲ್ಲಿ ಉಂಟಾದ ಸೋಲನ್ನು ಕೆ.ಆರ್ ಪೇಟೆ ಗೆಲುವಿನಲ್ಲಿ ಮರೆಯುತ್ತೇನೆ, ಹೀಗಾಗಿ ತಾವು ದೇವರಾಜು ಅವರನ್ನು ಗೆಲ್ಲಿಸಬೇಕು, ಕೆ.ಆರ್ ಪೇಟೆಯಲ್ಲಿನ ಗೆಲುವು ನನಗೆ ಮತ್ತಷ್ಟು ಶಕ್ತಿ ತುಂಬಿಸುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರ ಬಗ್ಗೆ ತಮಗೆ ಆಸಕ್ತಿಯಿಲ್ಲ ಎಂದು ಹೇಳಿದ ದೇವೇಗೌಡರು, ಎರಡು ರಾಷ್ಟ್ರೀಯ ಪಕ್ಷಗಳಿಗೆ ಪ್ರಾದೇಶಿಕ ಪಕ್ಷಗಳ ಜೊತೆ ವ್ಯವಹಾರ ನಡೆಸಲು ಬರುವುದಿಲ್ಲ ಎಂದು ಆರೋಪಿಸಿದ್ದಾರೆ

ರಾಜ್ಯದ ಹಾಗಬೂಪಕ್ಷದ ಹಿತದೃಷ್ಟಿಯಿಂದ ಚಿಕ್ಕಬಳ್ಳಾಪುರ ಮತ್ತು ಗೋಕಾಕ್ ನಲ್ಲಿ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ. ಬಿಜೆಪಿ ಕೇವಲ ಆರು ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯ, ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಆತಂಕಕ್ಕೀಡಾಗದ್ದಾರೆ ಎಂದು ಹೇಳಿದ್ದಾರೆ.

ನಾರಾಯಣಗೌಡರಿಗೆ ಪಕ್ಷ ಒಂದು ಗುರುತು ಹಾಗೂ ಜನಪ್ರಿಯತೆ ತಂದುಕೊಟ್ಟಿತ್ತು, ಆದರೆ ನಾರಾಯಣಗೌಡ ಜನತೆ ಹಾಗೂ ಪಕ್ಷದ ಆಶಯವನ್ನು ಮಣ್ಣುಪಾಲು ಮಾಡಿದ್ದಾರೆ ಎಂದು ಕೆ,ಆರ್ ಪೇಟೆ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT