ರಾಜಕೀಯ

ಬಳ್ಳಾರಿ ವಿಭಜಿಸಿದರೆ ಬೆಂಕಿ ಹೊತ್ತಿಉರಿಯಲಿದೆ: ಸೋಮಶೇಖರ ರೆಡ್ಡಿ ಆಕ್ರೋಶ

Srinivasamurthy VN

ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿದರೆ ಇಡೀ ಹೊತ್ತಿ ಉರಿಯಲಿದೆ ಎಂದು ಮಾಜಿ ಸಚಿವ ಗಾಲಿ ಸೋಮಶೇಖರ್ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ ರೆಡ್ಡಿ, 'ಜಿಲ್ಲೆಯನ್ನು ವಿಭಜಿಸುವ ವಿಚಾರ ಸಚಿವ ಸಂಪುಟದಲ್ಲಿ ಅನುಮೋದನೆಯಾದರೆ ಬೆಂಕಿ ಹೊತ್ತಿಕೊಳ್ಳುತ್ತದೆ. ಹಾಗಾಗಲು ನಾವು ಬಿಡುಲವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಅಂತೆಯೇ ಸಚಿವ ಸಂಪುಟ ಸಭೆಯನ್ನು ಮುಂದೂಡುವ ಸಾಧ್ಯತೆ ಇದ್ದು, ಸಭೆ ನಡೆದರೂ ಸಚಿವ ಬಿ.ಶ್ರೀರಾಮುಲು ಅವರು ವಿಭಜನೆಗೆ ವಿರೋಧ ವ್ಯಕ್ತಪಡಿಸಲಿದ್ದಾರೆ ಎಂದರು.

'ಬಳ್ಳಾರಿ ನಗರವೊಂದನ್ನೇ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಹೇಗಿರುತ್ತದೆ? ಬಳ್ಳಾರಿ ಅಖಂಡ ಜಿಲ್ಲೆಯಾಗಿರಬೇಕು. ನಾವು ಅಣ್ಣ ತಮ್ಮಂದಿರಂತಿದ್ದೇವೆ. ಬಳ್ಳಾರಿ ವಿಭಜನೆ ವಿರೋಧಿಸಿ ನಡೆಸಲಾಗುತ್ತಿರುವ ಬಂದ್‌ ಗೆ ನಮ್ಮ ಪರೋಕ್ಷ ಬೆಂಬಲವಿದೆ ಎಂದು ಹೇಳಿದ ಸೋಮಶೇಖರ್ ರೆಡ್ಡಿ, ಈ ಕುರಿತಂತೆ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರಿಗೆ ದೂರವಾಣಿ ಕರೆ ಮಾಡಿದಾಗ, ಬಹಿರಂಗವಾಗಿ ಹೇಳಿಕೆಗಳನ್ನು ಕೊಡಬಾರದು ಎಂದು ಹೇಳಿದರು. 

ಅಲ್ಲದೆ ಜಿಲ್ಲೆಯ ಜನರ ಪರವಾಗಿ ನಿಂತಿದ್ದೇನೆ ಎಂದು ಸ್ಪಷ್ಟಪಡಿಸಿರುವೆ. ಯಡಿಯೂರಪ್ಪನವರೂ ನನ್ನೊಂದಿಗೆ ಚರ್ಚಿಸಿದ್ದಾರೆ ಎಂದು ಸೋಮಶೇಖರ್ ರೆಡ್ಡಿ ಹೇಳಿದರು.

SCROLL FOR NEXT