ಸಂಗ್ರಹ ಚಿತ್ರ 
ರಾಜಕೀಯ

ತಂತಿಯ ಮೇಲಿನ ನಡಿಗೆ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ : ಎಂ.ಪಿ.ರೇಣುಕಾಚಾರ್ಯ

ಸಿಎಂ ಬಿಎಸ್ ವೈ ಅವರ ತಂತಿ ಮೇಲಿನ ನಡಿಗೆ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

ದಾವಣಗೆರೆ: ಸಿಎಂ ಬಿಎಸ್ ವೈ ಅವರ ತಂತಿ ಮೇಲಿನ ನಡಿಗೆ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

 ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಸಿಎಂ ಬಿಎಸ್ ಯಡಿಯೂರಪ್ಪ ಅವರ ತಂತಿ ಮೇಲಿನ ನಡಿಗೆ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ಯಡಿಯೂರಪ್ಪ ಅವರು ನಿನ್ನೆ ದಿನ ತಂತಿ ಮೇಲೆ ನಡಿಗೆ ಎಂದು ಹೇಳಿರುವುದು ವೀರಶೈವ ಮಠಗಳು ಅನುದಾನ ಕೇಳುತ್ತಿದ್ದವು, ಅಲ್ಲದೆ ಧಾರ್ಮಿಕ ಸಂಸ್ಥೆಗಳು ಹಣ ಕೇಳುತ್ತಿದ್ದಾರೆ. ಅದಕ್ಕಾಗಿ ಅವರು ಅನುದಾನ ಖರ್ಚು ಮಾಡಬೇಕಾದರೆ ಹತ್ತು ಬಾರಿ ಯೋಚನೆ ಮಾಡಿ ಹಣ ಬಿಡುಮಾಡಬೇಕು ಎಂದಿದ್ದಾರೆ. ಈ ವಿಚಾರದಲ್ಲಿ ಅನರ್ಥ ಕಲ್ಪಿಸಬೇಡಿ ಎಂದು ಹೇಳಿದರು.

ಇನ್ನು ಇದೇ ವೇಳೆ ಬಿಜೆಪಿ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಒಂದು ರಥದ ಎರಡು ಗಾಲಿಗಳಂತೆ ಯಡಿಯೂರಪ್ಪ ಹಾಗೂ ಕೆ.ಎಸ್ ಈಶ್ವರಪ್ಪ ಅವರು. ಕಾಂಗ್ರೆಸ್ ಹಾಗೂ ಜೆಡಿಎಸ್​ ಪಕ್ಷದವರು ಬಿಜೆಪಿ ಪಕ್ಷದಲ್ಲಿ ಭಿನ್ನಮತ ಇದೆ ಎಂದು ಸುಖಾ ಸುಮ್ಮನೆ ಹೇಳುತ್ತಿದ್ದಾರೆ. ಅವರಲ್ಲಿರುವ ಗೊಂದಲಗಳನ್ನು ಬಗೆಹರಿಸಲಾಗದೆ ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!