ನಳಿನ್ ಕುಮಾರ್ ಕಟೀಲ್ ಮತ್ತು ಯಡಿಯೂರಪ್ಪ 
ರಾಜಕೀಯ

ಯಡಿಯೂರಪ್ಪ ಜೊತೆ ಯಾವುದೇ ಮನಸ್ತಾಪವಿಲ್ಲ, ಅನರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಕಟೀಲ್

ನನ್ನ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡುವೆ ಯಾವುದೇ ರೀತಿಯ ಮನಸ್ತಾಪಗಳಿಲ್ಲ. ಅನರ್ಹ ಶಾಸಕರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುರುವಾರ ಹೇಳಿದ್ದಾರೆ. 

ಬೆಂಗಳೂರು: ನನ್ನ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡುವೆ ಯಾವುದೇ ರೀತಿಯ ಮನಸ್ತಾಪಗಳಿಲ್ಲ. ಅನರ್ಹ ಶಾಸಕರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುರುವಾರ ಹೇಳಿದ್ದಾರೆ. 

ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ವಾಪಸ್ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎಂಟು ದಿನಗಳಿಂದ ಮುಖ್ಯಮಂತ್ರಿ ಹಾಗೂ ನಾನು ಪ್ರವಾಸದಲ್ಲಿದ್ದೆವು. ಹೀಗಾಗಿ ಪರಸ್ಪರ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಇಂದು ಅವಕಾಶ ಸಿಕ್ಕಿದ್ದು, ಪಕ್ಷದ ಸಂಘಟನೆ ಬಗ್ಗೆ ಚರ್ಚೆ ನಡೆಸಿದ್ದೇವೆ. ನೆರೆ ಪರಿಹಾರದ ಕುರಿತಂತೆಯೂ ಚರ್ಚಿಸಿದ್ದೇವೆಂದು ತಿಳಿಸಿದ್ದಾರೆ. 

ಪಕ್ಷ ಸಂಘಠನೆ ಹಾಗೂ ಉಪ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದೇವೆ. ಯಡಿಯೂರಪ್ಪ ಅವರೇ ನನಗೆ ಮಾರ್ಗದರ್ಶಕರು. ಪದಾಧಿಕಾರಿಗಳ ಬದಲಾವಣೆ ವಿಚಾರದಲ್ಲಿ ನನ್ನ ಹಾಗೂ ಯಡಿಯೂರಪ್ಪ ನಡುವೆ ಯಾವುದೇ ಮನಸ್ತಾಪವಿಲ್ಲ. ಪ್ರಧಾನ ಕಾರ್ಯದರ್ಶಯಾಗಿ ಸಿಟಿ ರವಿ ಇದ್ದರು. ನಮ್ಮ ಪಕ್ಷದ ನಿಯಮ ಒಬ್ಬರಿಗೆ ಒಂದೇ ಹುದ್ದೆ ಎಂಬುದಾಗಿದೆ. ಹೀಗಾಗಿ ಸಿಟಿ ರವಿ ಸಚಿವರಾದ ಬಳಿಕ ಅವರ ಜಾಗಕ್ಕೆ ಕಾರ್ಯದರ್ಶಿಯಾಗಿ ಮಹೇಶ್ ಅವರನ್ನು ನೇಮಿಸಲಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ. 

ಇದೇ ವೇಳೆ ಅನರ್ಹ ಶಾಸಕರ ಕುರಿತು ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪು ಏನೇ ಬರಲಿ, ಅನರ್ಹ ಶಾಸಕರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಈ ಕುರಿತು ಅಮಿತ್ ಶಾ ಹಾಗೂ ಯಡಿಯೂರಪ್ಪ ಜೊತೆ ಸೇರಿ ಚರ್ಚೆ ನಡೆಸಿ ಉಪ ಚುನಾವಣೆ ಟಿಕೆಟ್ ನೀಡುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಮಧ್ಯಾಹ್ನ 2.30ಕ್ಕೆ ರಾಜೀನಾಮೆ; ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT