ಪ್ರವಾಹ ಪರಿಹಾರ: ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಕುಮಾರಸ್ವಾಮಿ
ಪ್ರವಾಹದಿಂದಾದಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರೈತರ ನಿರೀಕ್ಷೆಗಳನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು, ರಾಜ್ಯದ ಆಡಳಿತಾರೂಢ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.
ಬೆಂಗಳೂರು: ಪ್ರವಾಹದಿಂದಾದಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರೈತರ ನಿರೀಕ್ಷೆಗಳನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು, ರಾಜ್ಯದ ಆಡಳಿತಾರೂಢ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.
ಪ್ರವಾಹದಿಂದಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ನಷ್ಟವನ್ನು ಭರಿಸಲಾಗದೆ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೈತರ ಸಂಕಷ್ಟವನ್ನು ಸರ್ಕಾರ ಆಲಿಸುತ್ತಿಲ್ಲ. ಪ್ರವಾಹದಿಂದ ಚಿಕ್ಕಮಗಳೂರಿನ ಸಾವಿರಾರು ಕುಟುಂಬಗಳು ಸಂಕಷ್ಟದಲ್ಲಿದ್ದಾರೆಂದು ಹೇಳಿದ್ದಾರೆ.
ಇದೇ ವೇಳೆ ಉಡುಪಿ-ಚಿಕ್ಕಮಗಳೂರು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕಿಡಿಕಾರಿರುವ ಅವರು, ರೈತರಿಗೆ ಬೆಂಬಲವಾಗಿ ನಿಲ್ಲಬೇಕಿದ್ದ ಚಿಕ್ಕಮಗಳೂರು ಸಂಸದರು ಕಾಣೆಯಾಗಿದ್ದಾರೆ. ರೈತರ ಪರವಾಗಿ ಅವರಲ್ಲಿರುವ ಕಾಳಜಿ ಇದರಿಂದ ತಿಳಿದುಬರುತ್ತದೆ ಎಂದು ಟೀಕಿಸಿದ್ದಾರೆ.
ಕುಮಾರಸ್ವಾಮಿಯವರು ಏನನ್ನು ತೋರ್ಪಡಿಸುತ್ತಿದ್ದಾರೆ? ರೈತರ ನೋವುಗಳು ನನಗೆ ತಿಳಿದಿಲ್ಲ ಎಂದು ಅವರು ಹೇಳಿದರೆ, ಆಲೂಗಡ್ಡೆ ಬೆಳೆಯುವ ಮೂಲಕ ಶ್ರೀಮಂತರಾಗಿದ್ದರನ್ನು ಮೊದಲು ಅವರೇ ತಿಳಿದುಕೊಳ್ಳಬೇಕು ಎಂದು ಇದೇ ವೇಳೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.
ಇದರಂತೆ ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಕಂಡ ಅವರು, ಪರಿಹಾರ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ಹಲವು ನಿಯಮಾವಳಿ ಹಾಗೂ ಯೋಜನೆಗಳನ್ನಿಟ್ಟುಕೊಂಡಿದ್ದು, ಆ ಮೂಲಕ ಬಿಡುಗಡೆ ಮಾಡುತ್ತದೆ ಎಂದಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.