ರಾಜಕೀಯ

ಕಲಾಪಕ್ಕೆ ಮಾಧ್ಯಮಗಳಿಗೆ ನಿಷೇಧ: ಮಾಧ್ಯಮ ಸ್ವಾತಂತ್ರ್ಯಕ್ಕೆ ಸದಾ ಬದ್ಧ ಎಂದು ಟ್ವೀಟ್ ಮಾಡಿ, ಡಿಲೀಟ್ ಮಾಡಿದ ಸಿಎಂ

Srinivasamurthy VN

ಬೆಂಗಳೂರು: ವಿಧಾನಸಭೆ ಕಲಾಪಕ್ಕೆ ಖಾಸಗಿ ಮಾಧ್ಯಮಗಳಿಗೆ ನಿಷೇಧ ಹೇರಿರುವ ಸ್ಪೀಕರ್ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮನವಿ ಮಾಡುವುದಾಗಿ ಹೇಳಿ ಟ್ವೀಟ್ ಮಾಡಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಕೆಲವೇ ಕ್ಷಣಗಳಲ್ಲಿ ಅದನ್ನು ಡಿಲೀಟ್ ಮಾಡಿದ್ದಾರೆ.

ಹೌದು.. ಇಂದು ಆರಂಭವಾಗಿರುವ ವಿಧಾನಮಂಡಲ ಅಧಿವೇಶನಕ್ಕೆ ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಸ್ಪೀಕರ್ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡುವುದಾಗಿ ಹೇಳಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೆಲವೇ ಕ್ಷಣಗಳಲ್ಲಿ ಟ್ವೀಟ್ ಡಿಲೀಟ್ ಮಾಡಿದ್ದಾರೆ.

ಟ್ವೀಟ್ ನಲ್ಲಿ 'ಮಾಧ್ಯಮ ಸ್ವಾತಂತ್ರ್ಯಕ್ಕೆ ನನ್ನ ಸರ್ಕಾರ ಸದಾ ಬದ್ಧವಾಗಿದೆ. ವಿಧಾನಸಭೆಯ ಕಲಾಪದ ನೇರ ಪ್ರಸಾರಕ್ಕೆ ತಡೆ ಹಾಕಿರುವ ಸ್ಪೀಕರ್ ನಿರ್ಧಾರವನ್ನು ಪುನರ್ ಪರಿಶೀಲಿಸಲು ವಿನಂತಿ ಮಾಡುತ್ತೇನೆ" ಎಂದು ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿತ್ತು. ಆದರೆ ಕೆಲವೇ ಕ್ಷಣಗಳಲ್ಲಿ ಆ ಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ. 

ಸಿಎಂ ನಡೆ ಇದೀಗ ಭಾರಿ ಸುದ್ದಿಗೆ ಗ್ರಾಸವಾಗಿದ್ದು, ಸ್ಪೀಕರ್ ಅವರ ನಡೆಯನ್ನು ವಿರೋಧಿಸಿದ್ದ ಬಿಎಸ್ ವೈ ಟ್ವೀಟ್ ಡಿಲೀಟ್ ಮಾಡುವ ಮೂಲಕ ಅದನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಟೀಕಿಸಲಾಗುತ್ತಿದೆ.

SCROLL FOR NEXT