ಸಂಗ್ರಹ ಚಿತ್ರ 
ರಾಜಕೀಯ

ಯಡಿಯೂರಪ್ಪ ಬಿಜೆಪಿ ನಾಯಕರೇ ಒಪ್ಪದ ಕೂಸು: ಸಿದ್ದರಾಮಯ್ಯ ಲೇವಡಿ

ಮುಖ್ಯಮಂತ್ರಿ ಸ್ಥಾನದಲ್ಲಿರುವ ಬಿಎಸ್ ಯಡಿಯೂರಪ್ಪ ಬಿಜೆಪಿ ನಾಯಕರೇ ಒಪ್ಪದ ಕೂಸು ಎಂದು ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಲ್ಲಿರುವ ಬಿಎಸ್ ಯಡಿಯೂರಪ್ಪ ಬಿಜೆಪಿ ನಾಯಕರೇ ಒಪ್ಪದ ಕೂಸು ಎಂದು ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಗುರುವಾರ ನೆರೆ ಪರಿಸ್ಥಿತಿ ಕುರಿತ ಚರ್ಚೆ ವೇಳೆ ಮಾತನಾಡಿದ ಅವರು, 'ರಾಜ್ಯದಲ್ಲಿ ಹಿಂದೆಂದೂ ಕಾಣದ ಪ್ರವಾಹ ಪರಿಸ್ಥಿತಿ ಉಂಟಾಗಿದರೂ ಸಮಪರ್ಕವಾದ ಪರಿಹಾರ ನೀಡದೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಅನಾಯ ಎಸಗಿದ್ದು, 56 ಇಂಚು ಎದೆವುಳ್ಳ ಪ್ರಧಾನಿಗೆ ತಾಯಿ ಹೃದಯ ಇಲ್ಲವಲ್ಲ ಎಂಬುದೇ ನೋವಿನ ಸಂಗತಿ.ರಾಜ್ಯಕ್ಕೆ ಬಂದು ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಸಮೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.

'ಪ್ರಧಾನಿಯವರು 56 ಇಂಚು ಎದೆ ಇದೆ ಎಂದು ಹೇಳಿಕೊಳ್ಳುತ್ತಾರೆ. ಪೈಲ್ವಾನ್, ಬಾಡಿಬಿಲ್ಡರ್‌ಗಳಿಗೂ ಎದೆ ಇರುತ್ತದೆ. ಆದರೆ, ಆ ಎದೆಯಲ್ಲಿ ತಾಯಿ ಹೃದಯ ಇಲ್ಲವಲ್ಲ ಎಂಬುದೇ ಬೇಸರ. ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹಿಂದೆಂದೂ ಕಾಣದ ನೆರೆ ಎದುರಾದರೂ ಸಮರ್ಪಕವಾದ ಪರಿಹಾರ ನೀಡದೆ ರಾಜ್ಯಕ್ಕೆ ಅನ್ಯಾಯ ಮಾಡಲಾಗಿದೆ. ಪ್ರಧಾನಿಗಳು ವಿದೇಶ ಪ್ರವಾಸ ಕೈಗೊಳ್ಳಲು ಅಭ್ಯಂತರ ಇಲ್ಲ. ಆದರೆ, ಯಾವುದಕ್ಕೆ ಆದ್ಯತೆ ನೀಡಬೇಕು ಎಂಬುದು ಗೊತ್ತಿರಬೇಕು. ವಿದೇಶಕ್ಕೆ ಹೋಗದಿದ್ದರೆ ಪ್ರಳಯವಾಗುವುದಿಲ್ಲ. ಅದನ್ನು ಮುಂದೂಡಬಹುದು. ಪ್ರವಾಹದಿಂದ ಲಕ್ಷಾಂತರ ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ. ಈ ಬಗ್ಗೆ ಗಮನ ಹರಿಸಬೇಕಿತ್ತಲ್ಲವೇ?' ಎಂದು ಅವರು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT