ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ 
ರಾಜಕೀಯ

ಬಿಜೆಪಿಯಿಂದ ಕೇಂದ್ರೀಯ ಸಂಸ್ಥೆಗಳ ದುರುಪಯೋಗ: ದಿನೇಶ್ ಗುಂಡೂರಾವ್

ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಪ್ರತಿಪಕ್ಷವನ್ನು ಹಣಿಯಲು ಬಿಜೆಪಿ ಪ್ರಯತ್ನಿಸುತ್ನಿದೆ. ಜನರು ಇದನ್ನು ಯಾವತ್ತೂ ಒಪ್ಪುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಪ್ರತಿಪಕ್ಷವನ್ನು ಹಣಿಯಲು ಬಿಜೆಪಿ ಪ್ರಯತ್ನಿಸುತ್ನಿದೆ. ಜನರು ಇದನ್ನು ಯಾವತ್ತೂ ಒಪ್ಪುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಹಂಕಾರದಲ್ಲಿ ಸರ್ಕಾರವನ್ನು ನಡೆಸುತ್ತಿದೆ. ಅಧಿವೇಶನವನ್ನು ಮೂರೇ ದಿನ ಯಾಕೆ ಕರೆದಿದ್ದು ? ಪ್ರವಾಹ ಹಾಗೂ ಬರದ ಬಗ್ಗೆ ಸಮಗ್ರ ಚರ್ಚೆಯಾಗಬೇಕು. ಆದರೆ ಸರ್ಕಾರದ ನಡೆ ಬೇಸರ ತರಿಸುತ್ತಿದೆ ಎಂದು ಹೇಳಿದರು.

ಬಿಜೆಪಿಯಲ್ಲಿ ಎಷ್ಟು ಭ್ರಷ್ಟರಿದ್ದಾರೆ. ಅವರ ಮಂತ್ರಿಗಳ ಮೇಲೆ ಸಾಕಷ್ಟು ಆರೋಪಗಳಿವೆ. ಅವರ ಮನೆಯ ಮೇಲೆ ಯಾಕೆ ದಾಳಿ ನಡೆಯುತ್ತಿಲ್ಲ. ? ಸೇಡಿನ ರಾಜಕೀಯವನ್ನು ಶುರು ಮಾಡಿ ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರದ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆ ತಿರುಗಿಸಲು ಐಟಿ ದಾಳಿ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT