ನಳಿನ್ ಕುಮಾರ್ ಕಟೀಲ್ 
ರಾಜಕೀಯ

ಪ್ರತಿಕ್ರಿಯೆ ನೀಡದಿದ್ದರೆ ಯತ್ನಾಳ್ ವಿರುದ್ಧ ಶಿಸ್ತುಕ್ರಮ: ಕಟೀಲ್ ಎಚ್ಚರಿಕೆ 

ಪಕ್ಷದ ಶಿಸ್ತು ಸಮಿತಿ ನೀಡಿದ ಶೋಕಾಸ್ ನೋಟೀಸ್ ಗೆ ಉತ್ತರಿಸುವುದು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನ ಕರ್ತವ್ಯ, ಒಂದು ವೇಳೆ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡದಿದ್ದರೇ ಅವರ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಬಿಜೆಪಿ  ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳೂರು: ಪಕ್ಷದ ಶಿಸ್ತು ಸಮಿತಿ ನೀಡಿದ ಶೋಕಾಸ್ ನೋಟೀಸ್ ಗೆ ಉತ್ತರಿಸುವುದು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನ ಕರ್ತವ್ಯ, ಒಂದು ವೇಳೆ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡದಿದ್ದರೇ ಅವರ ವಿರುದ್ದ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಬಿಜೆಪಿ  ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಯತ್ನಾಳ್ ಅವರಿಗೆ ನೋಟೀಸ್ ನೀಡಲಾಗಿದೆ, ಬಿಜೆಪಿ ರಾಷ್ಟ್ರೀಯ ನಾಯಕರು ಎಲ್ಲಾ ವಿದ್ಯಮಾನಗಳನ್ನು ಗಮನಿಸುತ್ತಿದ್ದಾರೆ, ಸದ್ಯ ಚೆಂಡು ಹೈಕಮಾಂಡ್ ಅಂಗಳದಲ್ಲಿದೆ.ಯತ್ನಾಳ್ ನೋಟೀಸ್ ಗೆ ಪ್ರತಿಕ್ರಿಯೆ ನೀಡದಿದ್ದರೇ ಯಾವ ರೀತಿಯ ಕ್ರಮ ಕೈಗೊಳ್ಳಬೇಕು ಎಂಬುದನ್ನು ಕೇಂದ್ರ ನಾಯಕರು ನಿರ್ಧರಿಸಲಿದ್ದಾರೆ, ನೊಟೀಸ್ ಉತ್ತರಿಸದಿರುವುದು ಅಹಂಕಾರವಾಗುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಪ್ರವಾಹ ಪರಿಸ್ಥಿತಿ ಕೇಂದ್ರ ಸರ್ಕಾರ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕಳೆದ ವಾರ ಬಸನರಾಜ ಪಾಟೀಲ್ ಯತ್ನಾಳ್ ಹರಿಹಾಯ್ದಿದ್ದರು.  ಯತ್ನಾಳ್ ಅವರ ಈ ಹೇಳಿಕೆಗಾಗಿ ಪಕ್ಷದ ಶಿಸ್ತು ಸಮಿತಿ ಪಕ್ಷದ ನಿಯಮದಂತೆ ನೊಟೀಸ್ ಜಾರಿ ಮಾಡಿ ಉತ್ತರಿಸುವಂತೆ ಸೂಚಿಸಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲೆ ಇಸ್ರೇಲ್ ದಾಳಿ: ರಾಜಧಾನಿ ಟೆಹ್ರಾನ್ ನಲ್ಲಿ IDF ಮಿಸೈಲ್ ಸ್ಟ್ರೈಕ್, ತುರ್ತು ಪರಿಸ್ಥಿತಿ ಘೋಷಣೆ!

'ಇರಾನ್ ಅಪಾಯಕಾರಿ ದೇಶ, ಏನಾದರೂ ದೊಡ್ಡ ನಿರ್ಧಾರ ಕೈಗೊಳ್ಳಬೇಕು': ಡೊನಾಲ್ಡ್ ಟ್ರಂಪ್!

ಕ್ವಾರ್ಟರ್ ಫೈನಲ್‌ನಲ್ಲಿ ಭಾರತ - ವೆಸ್ಟ್ ಇಂಡೀಸ್ ಮುಖಾಮುಖಿ; ಹೆಗಿದೆ ಉಭಯ ತಂಡಗಳ ಟ್ರ್ಯಾಕ್ ರೆಕಾರ್ಡ್?

ಚಿಕ್ಕಬಳ್ಳಾಪುರ: ಅನೈತಿಕ ಸಂಬಂಧಕ್ಕೆ ಆಗಾಗ್ಗೆ ಜಗಳ, ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ! ಪತ್ನಿಯೇ ಕೊಲೆ ಮಾಡಿರುವ ಶಂಕೆ

593 ಕೋಟಿ GST ವಂಚನೆ ಪತ್ತೆ; ಬೃಹತ್ ನಕಲಿ ITC ಜಾಲದ ಮಾಸ್ಟರ್‌ಮೈಂಡ್ ಬಂಧನ

SCROLL FOR NEXT