ದೇವೇಗೌಡ 
ರಾಜಕೀಯ

ಐಟಿ ದಾಳಿ ರಾಜಕೀಯ ಪ್ರೇರಿತ: ದೇವೇಗೌಡ

ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಮಾಜಿ ಸಚಿವ ಆರ್.ಎಲ್.ಜಾಲಪ್ಪ ನಿವಾಸಗಳು ಹಾಗೂ ಕಚೇರಿ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ. 

ಮೈಸೂರು: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಮಾಜಿ ಸಚಿವ ಆರ್.ಎಲ್.ಜಾಲಪ್ಪ ನಿವಾಸಗಳು ಹಾಗೂ ಕಚೇರಿ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ. 

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಐಟಿ ದಾಳಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 

ಕೇಂದ್ರದ ಮೋದಿ ಸರ್ಕಾರ ಐಟಿ ಹಾಗೂ ಇಡಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಿಜೆಪಿಯವರೇನು ಮುಗ್ದರೇ? ರಾಜಕೀಯದಲ್ಲಿ ಯಾರೂ ಪರಿಪೂರ್ಣರಲ್ಲ ಎಂದು ಹೇಳಿದ್ದಾರೆ. 

ತಮ್ಮ ತಂದೆಯವರು ನಡೆಸುತ್ತಿದ್ದ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಪರಮೇಶ್ವರ ಅವರು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಸಿಕ್ಕಿರುವ ರೂ.6 ಕೋಟಿ ಹಣ ಪರಮೇಶ್ವರ ಅವರ ತಂದೆ ಸಂಪಾದನೆ ಮಾಡಿದ್ದು. ರಾತ್ರೋರಾತ್ರಿ ಏನು ಅವರು ಆಸ್ತಿಯನ್ನು ಕಬಳಿಸಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!