ಹೆಚ್.ಡಿ.ದೇವೇಗೌಡ 
ರಾಜಕೀಯ

ಉಪ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ: ದೇವೇಗೌಡ

ವಿಧಾನಸಭಾ ಉಪ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ. 

ಮೈಸೂರು: ವಿಧಾನಸಭಾ ಉಪ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ. 

ಹುಣಸೂರು ತಾಲೂಕಿನ ಗಡ್ಡಿಗೆ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಮತ್ತೆ ರಾಜ್ಯದಲ್ಲಿ ಚುನಾವಣೆ ಎದುರಾಗುವಂತೆ ಮಾಡಲಿದೆ. 17 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುವುದೂ ಕೂಡ ಸಂಶಯವೇ ಎಂದು ಹೇಳಿದ್ದಾರೆ. 

ಸುಪ್ರೀಂಕೋರ್ಟ್ ಆದೇಶದ ಬಳಿಕವೇ ಉಪ ಚುನಾವಣೆಯೇ ಅಥವಾ ವಿಧಾನಸಭಾ ಚುನಾವಣೆ ನಡೆಯಲಿದೆಯೇ ಎಂಬುದನ್ನು ಊಹಿಸಲು ಸಾಧ್ಯ. ಹುಣಸೂರು ಕ್ಷೇತ್ರದಿಂದ ನಮ್ಮ ಕುಟುಂಬದ ಯಾರೊಬ್ಬರೂ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪ್ರಜ್ವಲ್ ರೇವಣ್ಣ ಈಗಾಗಲೇ ಸಂಸದರಾಗಿದ್ದು, ಚುನಾವಣೆಯಲ್ಲಿ ಅವರು ಸ್ಪರ್ಧಿಸುವುದಿಲ್ಲ. ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಕೂಡ ಸ್ಪರ್ಧಿಸುವುದಿಲ್ಲ. ಸ್ಥಳೀಯ ನಾಯಕರನ್ನು ಸ್ಪರ್ಧೆಗಿಳಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್