ರಾಜಕೀಯ

ರಾಜ್ಯ ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ವಿಪಕ್ಷಗಳ ಒತ್ತಾಯ

Manjula VN

ಬೆಂಗಳೂರು: ರಾಜ್ಯದ ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಮೇಲ್ಮನೆಯಲ್ಲಿ ವಿರೋಧ ಪಕ್ಷಗಳು ಆಗ್ರಹಿಸಿವೆ. 

ರಾಜ್ಯದಲ್ಲಿ 22 ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿದ್ದು, ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಹಾಗೂ ಹೆಚ್ಚಿನ ಪರಿಹಾರವನ್ನು ಪಡೆಯಬೇಕೆಂದು ಮೇಲ್ಮನೆಯ ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ. 

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್ ಮಾತನಾಡಿ, 118 ವರ್ಷಗಳಲ್ಲಿ ರಾಜ್ಯ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಆದರೂ ರಾಜ್ಯ ಸರ್ಕಾರ ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಹಿಂಜರಿಯುತ್ತಿದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಮಾತನಾಡಿರುವ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿಯವರು, ಕರ್ನಾಟಕ ಬಿಜೆಪಿಯಿಂದ ಸಂಸತ್ತಿಗೆ 25 ಮಂದಿ ಸಂಸದರು ಆಯ್ಕೆಯಾಗಿದ್ದಾರೆ. ಆದರೂ ಪ್ರಧಾನಿ ಎಂದರೆ ನಿಮಗೆ ಭಯವೇಕೆ? ನಮಗೆ ಮಾತನಾಡಲು ಸಾಧ್ಯವಾಗದಿದ್ದರೆ, ನಿಮ್ಮೊಂದಿಗೆ ನಮ್ಮನ್ನು ಕರೆದುಕೊಂಡು ಹೋಗಿ. ಕರ್ನಾಟಕದ ಪರವಾಗಿ ನಾವು ಮಾತನಾಡುತ್ತೇವೆ. ನಮಗೆ ಹೆಚ್ಚಿನ ಪರಿಹಾರದ ಅಗತ್ಯವಿದೆ ಎಂದು ತಿಳಿಸಿದ್ದಾರೆ. 

SCROLL FOR NEXT