ರಾಜಕೀಯ

ಹುಣುಸೂರು, ಕೆ.ಆರ್.ಪೇಟೆ ಮೇಲೆ ಬಿಜೆಪಿ ಕಣ್ಣು: ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆ ಛಿದ್ರಗೊಳಿಸಲು ತಯಾರಿ 

Sumana Upadhyaya

ಬೆಂಗಳೂರು; ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ನೇಮಕಗೊಂಡಿರುವ ಸಿದ್ದರಾಮಯ್ಯನವರಿಗೆ ಆತಿಥ್ಯ ನೀಡುವಲ್ಲಿ ಕಾಂಗ್ರೆಸ್ ನಿರತವಾಗಿದ್ದರೆ ಇತ್ತ ಬಿಜೆಪಿ ಹುಣುಸೂರು ಮತ್ತು ಕೆ ಆರ್ ಪೇಟೆ ಕ್ಷೇತ್ರಗಳ ಉಪ ಚುನಾವಣೆಗೆ ತಳಮಟ್ಟದಲ್ಲಿ ಕೆಲಸ ಮಾಡಲು ಆರಂಭಿಸಿದೆ.


ಬಿಜೆಪಿ ಸರ್ಕಾರದ ಉಳಿವಿಗೆ ಉಪ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದು ಕೇಸರಿ ಪಕ್ಷಕ್ಕೆ ಅನಿವಾರ್ಯವಾಗಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನ ಭದ್ರಕೋಟೆ ಎನಿಸಿರುವ ಹಳೆ ಮೈಸೂರು ಭಾಗದಲ್ಲಿ ಲಗ್ಗೆಯಿಡಲು ಬಿಜೆಪಿ ಯತ್ನಿಸುತ್ತಿದೆ.


ರಾಜ್ಯದಲ್ಲಿ ಬೇರೆ ಪ್ರಮುಖ ರಾಜಕೀಯ ಪಕ್ಷಗಳು ಅನರ್ಹ ಶಾಸಕರ ಬಗ್ಗೆ ಸುಪ್ರೀಂ ಕೋರ್ಟ್ ನ ತೀರ್ಪಿಗೆ ಕಾಯುತ್ತಿದ್ದರೆ ಬಿಜೆಪಿ ಮಾತ್ರ ಉಪ ಚುನಾವಣೆಗೆ ಸಾಕಷ್ಟು ಸಿದ್ದತೆ ಮಾಡಿಕೊಳ್ಳುತ್ತಿದೆ. ಹುಣುಸೂರು ಮತ್ತು ಕೆ ಆರ್ ಪೇಟೆ ಕ್ಷೇತ್ರಗಳಲ್ಲಿ ಬೂತ್ ಮಟ್ಟದ ಸಮಿತಿಗಳನ್ನು ರಚಿಸಿ ಎಸ್.ಸಿ, ಎಸ್.ಟಿ ಮತ್ತು ಒಬಿಸಿ ಸಮುದಾಯಕ್ಕೆ ಸೇರಿದ ಜನರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ.


ಕೇಂದ್ರ ಸರ್ಕಾರ ಸಂವಿಧಾನ ವಿಧಿ 370ನ್ನು ರದ್ದುಪಡಿಸಿರುವ ಬಗ್ಗೆ, ರಫೆಲ್ ಯುದ್ಧ ವಿಮಾನವನ್ನು ಭಾರತೀಯ ವಾಯುಪಡೆಗೆ ಸೇರಿಸಿರುವುದು, ಮೋದಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಮೊದಲಾದವುಗಳ ಬಗ್ಗೆ ಜನರ ಅಭಿಪ್ರಾಯಗಳನ್ನು ಬಿಜೆಪಿ ಸಂಗ್ರಹಿಸುತ್ತಿದೆ. ಕಳೆದ ಮೈತ್ರಿ ಸರ್ಕಾರದಲ್ಲಿ ಆದ ತಪ್ಪುಗಳನ್ನು ಜನರಿಗೆ ಮನದಟ್ಟು ಮಾಡಿ ತಮ್ಮ ಸರ್ಕಾರ ಉತ್ತಮ ಆಡಳಿತ ನೀಡುತ್ತದೆ ಎಂದು ಭರವಸೆ ನೀಡುತ್ತಿದ್ದಾರೆ ಬಿಜೆಪಿ ನಾಯಕರುಗಳು.

SCROLL FOR NEXT