ಎಚ್.ಡಿ. ಕುಮಾರಸ್ವಾಮಿ 
ರಾಜಕೀಯ

ಸಿಬಿಐ, ಇಡಿ ಭಯಕ್ಕೆ ಬಿಜೆಪಿ ಸರ್ಕಾರದ ದೋಷಗಳನ್ನು ಪ್ರಶ್ನಿಸಲು ಯಾರೂ ಮುಂದಾಗುತ್ತಿಲ್ಲ: ಕುಮಾರಸ್ವಾಮಿ

ಇಂದು ಭಾರತ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದೆ. ಯಾವುದೇ ರಾಜಕೀಯ ಪಕ್ಷಗಳ ನಾಯಕರು ಕೇಂದ್ರ ಸರ್ಕಾರ ಹಾಗೂ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಲು ಹಿಂಜರಿಯುತ್ತಿದ್ದಾರೆ. ಮೋದಿ ನೇತೃತ್ವದ ಸರ್ಕಾರದ ನಿರ್ಧಾರಗಳನ್ನು ಪ್ರಶ್ನಿಸಲು ಯಾರಿಗೂ ಧೈರ್ಯವಿಲ್ಲ ಎಂದು  ಕರ್ನಾಟಕದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಹಾಸನ: ಇಂದು ಭಾರತ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದೆ. ಯಾವುದೇ ರಾಜಕೀಯ ಪಕ್ಷಗಳ ನಾಯಕರು ಕೇಂದ್ರ ಸರ್ಕಾರ ಹಾಗೂ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಲು ಹಿಂಜರಿಯುತ್ತಿದ್ದಾರೆ. ಮೋದಿ ನೇತೃತ್ವದ ಸರ್ಕಾರದ ನಿರ್ಧಾರಗಳನ್ನು ಪ್ರಶ್ನಿಸಲು ಯಾರಿಗೂ ಧೈರ್ಯವಿಲ್ಲ ಎಂದು  ಕರ್ನಾಟಕದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಹಾಸನದ ಹಾಸನಾಂಬಾ ದೇವಾಲಯಕ್ಕೆ ಭೇಟಿ ನೀಡುವ ಮುನ್ನ ಮಾದ್ಯಮಗಳೊಂದಿಗೆ ಮಾತನಾಡಿದ  ಎಚ್‌ಡಿಕೆ, ಸಿಬಿಐ ಮತ್ತು ಐ-ಟಿ ಯಂತಹ ಸ್ವಾಯತ್ತ ಸಂಸ್ಥೆಗಳ ಭಯದಲ್ಲಿ, ನಮ್ಮಂತಹ ರಾಜಕೀಯ ಮುಖಂಡರು ಬಿಜೆಪಿ ಸರ್ಕಾರದ ಅಕ್ರಮಗಳು ಮತ್ತು ಲೋಪಗಳನ್ನು ಪ್ರಶ್ನಿಸಲು  ವಿಫಲರಾಗಿದ್ದೇವೆ ಎಂದರು.

"ನಾನು ಯಾವುದೇ ದಾಳಿಗಳಿಗೆ ಎಂದಿಗೂ ಹೆದರುವುದಿಲ್ಲ. ಒಮ್ಮೆ  ಐ-ಟಿ ಅಧಿಕಾರಿಗಳು ನನ್ನ ನಿವಾಸದ ಮೇಲೆ ದಾಳಿ ಂಆಡಲಿ, ಅಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದಂತೆ ನಾನು ಹಗರಣಗಳ ದಾಖಲೆಗಳನ್ನಿಟ್ಟುಕೊಂಡಿದ್ದೇನೆಯೆ ಎನ್ನುವುದು ಸಾಬೀತಾಗಲಿ" ಕುಮಾರಸ್ವಾಮಿ ಹೇಳಿದ್ದಾರೆ.

"ಯಾವುದೇ ಉದ್ದೇಶಕ್ಕಾಗಿ ನಾನು ಆಡಳಿತ ಯಂತ್ರವನ್ನೆಂದಿಗೂ ದುರ್ಬಳಕೆ ಮಾಡಿಕೊಂಡಿಲ್ಲ. ಹಾಗಾಗಿ ನನಗೆ ಯಾವುದೇ ಸ್ವಾಯತ್ತ ಸಂಸ್ಥೆಗಳ ಬಗ್ಗೆ ಭಯಪಡುವ ಪ್ರಶ್ನೆಯೇ ಇಲ್ಲ. ಸ್ವಾಯತ್ತ ಸಂಸ್ಥೆಗಳು ಇನ್ನೂ ಅಸಂಖ್ಯಾತ ಆಸ್ತಿಗಳನ್ನು ಹೊಂದಿರುವ ಮತ್ತು ಹಲವಾರು ಹಗರಣಗಳಲ್ಲಿ ಭಾಗಿಯಾಗಿರುವ ಹಲವಾರು ಬಿಜೆಪಿ ಮುಖಂಡರನ್ನು ಪ್ರಶ್ನಿಸಿಲ್ಲ."

ಲೈಂಗಿಕ ಹಗರಣದ ಆರೋಪಿಯಾದರೂ ಸಹ ಐಷಾರಾಮಿ ಜೀವನವನ್ನು ನಡೆಸುತ್ತಿರುವ ಉತ್ತರ ಪ್ರದೇಶದ ಸಂಸದ ಸ್ವಾಮಿ ಚಿನ್ಮಯಾನಂದ ಅವರ ಉದಾಹರಣೆ ನಿಡಿದ ಕುಮಾರಸ್ವಾಮಿ ಪ್ರಧಾನಿ ಮೋದಿಯವರು ಪ್ರವಾಹದಿಂದ ಹಾನಿಗೊಳಗಾದ ರಾಜ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸುವ ಬದಲು ಚುನಾವಣಾ ಪ್ರಚಾರಕ್ಕೆ ಪ್ರಾಮುಖ್ಯತೆ ನೀಡಿದ್ದಾರೆ ಎಂದು ಆರೋಪಿಸಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ  ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಬಿಎಸ್‌ವೈ ಹೇಳಿಕೆ ನಿಡಿದ್ದು ದೇಶದ ಇತರ ಭಾಗಗಳಿಗೆ ಹೋಲಿಸಿದರೆ ಕರ್ನಾಟಕ ಉತ್ತಮ ಸ್ಥಿತಿಯಲ್ಲಿದೆ ಎಂದರು.

ದಿನನಿತ್ಯದ ಆಡಳಿತದ ಮೇಲ್ವಿಚಾರಣೆಗೆ ಆರ್‌ಎಸ್‌ಎಸ್ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದೆ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ. ಸಿಎಂ ಮತ್ತು ಅವರ ಕ್ಯಾಬಿನೆಟ್ ಸಹೋದ್ಯೋಗಿಗಳನ್ನು ನಿಯಂತ್ರಿಸಲು ಮತ್ತು ಮೇಲ್ವಿಚಾರಣೆ ಮಾಡಲು ಇವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದೂ ಕುಮಾರಸ್ವಾಮಿ ಹೇಳಿದ್ದಾರೆ.

ದೇವೇಗೌಡರು ಹಾಸನದಿಂದಲೇ ಲೋಕಸಭೆಗೆ ಸ್ಪರ್ಧಿಸಬೇಕಿತ್ತು ಎಂದು ಅಭಿಪ್ರಾಯಪಟ್ಟ ಕುಮಾರಸ್ವಾಮಿ ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸಿದ್ದಕ್ಕಾಗಿ ಸೋತರೆಂದು ಹೇಳಿದ್ದಾರೆ.ಒಂದೊಮ್ಮೆ ದೇವೇಗೌಡರು ಸಂಸತ್ತು ಪ್ರವೇಸಿಸಿದ್ದರೆ ಮೋದಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಲು ಸಾಧ್ಯವಾಗುತ್ತಿತ್ತು ಎಂದು ಅವರು ಹೇಳಿದರು.

ಯಾದಗಿರಿ ಜಿಲ್ಲೆ ಗುರುಮಿಟ್ಕಲ್  ಕ್ಷೇತ್ರಕ್ಕೆ ಅಂದಿನ ಸಮ್ಮಿಶ್ರ ಸರ್ಕಾರ ಅನುದಾನ ಮಂಜೂರು ಮಾಡಿತ್ತು. ಆದರೆ ಜೆಡಿಎಸ್ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದ್ದ ಬಿಜೆಪಿ ಸರ್ಕಾರ ಪ್ರವಾಹ ಪರಿಹಾರ ಕಾರ್ಯಗಳನ್ನು ನಿರ್ಲಕ್ಷಿಸಿ ಅನರ್ಹ ಶಾಸಕರ ಕ್ಷೇತ್ರಗಳಿಗೆ ಕೋಟಿ ರೂಪಾಯಿಗಳನ್ನು ಮಂಜೂರು ಮಾಡುತ್ತಿದೆ. ಎಂದ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ತಮ್ಮ ಪಕ್ಷವು ಎಲ್ಲಾ 15 ವಿಧಾನಸಭಾ ಕ್ಷೇತ್ರಗಳಿಗೆ ತನ್ನದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಮತ್ತು ಮೈತ್ರಿಕೂಟದ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು.

ಕುಮಾರಸ್ವಾಮಿ ಅವರು ಇಂದು  ಪತ್ನಿ ಅನಿತಾ, ತಂದೆ ಎಚ್.ಡಿ.ದೇವೇಗೌಡ, ತಾಯಿ ಚನ್ನಮ್ಮ ಮತ್ತು ಸಹೋದರಿಯರೊಂದಿಗೆ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿ ದೇವಿಗೆ  ವಿಶೇಷ ಪೂಜೆಯನ್ನು ಅರ್ಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT