ಸಿದ್ದರಾಮಯ್ಯ 
ರಾಜಕೀಯ

ಏಪ್ರಿಲ್ ತಿಂಗಳಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಸಿದ್ದರಾಮಯ್ಯ

ಇನ್ನು ಕೆಲವೇ ತಿಂಗಳುಗಳು ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ಬಾಗಲಕೋಟೆ: ಇನ್ನು ಕೆಲವೇ ತಿಂಗಳುಗಳು ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ಪ್ರವಾಹ ಪರಿಸ್ಥಿತಿ ಪರಿಶೀಲನೆ ನಡೆಸುವ ಸಲುವಾಗಿ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಡಿಯೂರಪ್ಪ ಸರ್ಕಾರ ಇನ್ನು ಕೆಲವೇ ತಿಂಗಳು ಮಾತ್ರ ಅಧಿಕಾರದಲ್ಲಿರಲಿದ್ದು, ಜನರು ಯಡಿಯೂರಪ್ಪ ಹಾಗೂ ಅವರ ಸರ್ಕಾರದ ಮೇಲೆ ಭರವಸೆಗಳನ್ನು ಇಟ್ಟುಕೊಳ್ಳಬಾರದು ಎಂದು ಹೇಳಿದ್ದಾರೆ. 

ಹೇಳಿಕೊಳ್ಳುವಂತಹ ಕೆಲಸಗಳನ್ನು ಬಿಜೆಪಿ ಮಾಡುತ್ತಿಲ್ಲ. ಸ್ಥಳೀಯ ಜನರು ಯಡಿಯೂರಪ್ಪ ಅವರ ಮೇಲೆ ಭರವಸೆಗಳನ್ನು ಇಟ್ಟುಕೊಳ್ಳಬಾರದು. ಆಡಳಿತಾರೂಢ ಸರ್ಕಾರ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಉರುಳಲಿದೆ. ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಜನರ ಸಂಕಷ್ಟವನ್ನು ಪರಿಹರಿಸಲಿದೆ ಎಂದು ತಿಳಿಸಿದ್ದಾರೆ. 

ಪ್ರವಾಹ ಪೀಡಿತ ಗ್ರಾಮಗಳ ವಾಸ್ತವಿಕ ಪರಿಸ್ಥಿತಿಯನ್ನು ಯಡಿಯೂರಪ್ಪ ಅವರಿಗೆ ತಿಳಿಸಲು ನನ್ನಿಂದ ಸಾಧ್ಯವಾದಷ್ಟು ಪ್ರಯತ್ನವನ್ನು ನಾವು ಮಾಡಿದ್ದೇವೆ. ನನ್ನಿಂದ ಸಾಧ್ಯವಾದ ಕೆಲಸಗಳನ್ನೂ ನಾನು ಮಾಡಿದ್ದೇನೆ. ನೆರೆ ಪರಿಹಾರ ಕುರಿತು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT