ಬಿ. ಶ್ರೀರಾಮುಲು 
ರಾಜಕೀಯ

ಡಿಕೆಶಿ  ಜೈಲಿನಿಂದ ಹೊರಬರಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೆ; ಶ್ರೀರಾಮುಲು

‘ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜೈಲು ಸೇರಿದ್ದ  ಶಾಸಕ ಡಿ.ಕೆ. ಅವರು ಶೀಘ್ರ ಬಿಡುಗಡೆಯಾಗಲಿ ಎಂದು ನಾನೂ ದೇವರಲ್ಲಿ ಪ್ರಾರ್ಥಿಸಿದ್ದೆ’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಚಿತ್ರದುರ್ಗ: ‘ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜೈಲು ಸೇರಿದ್ದ  ಶಾಸಕ ಡಿ.ಕೆ. ಅವರು ಶೀಘ್ರ ಬಿಡುಗಡೆಯಾಗಲಿ ಎಂದು ನಾನೂ ದೇವರಲ್ಲಿ ಪ್ರಾರ್ಥಿಸಿದ್ದೆ’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
  
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನಾವೆಂದು ಡಿ.ಕೆ. ಶಿವಕುಮಾರ್ ಮತ್ತು ಅವರ ಕುಟುಂಬಕ್ಕೆ ಕೆಟ್ಟದನ್ನು ಬಯಸಿರಲಿಲ್ಲ. ನಾವು ಶತ್ರುಗಳಿಗೂ ಒಳ್ಳೆಯದಾಗಲಿ ಎಂದು ಬಯಸುತ್ತೇನೆ. ಹಾಗಾಗಿ ಶಿವಕುಮಾರ್ ಅವರಿಗೂ ಒಳ್ಳೆಯದನ್ನೇ ಬಯಸಿದ್ದೆ ಎಂದರು. 
  
ಕಾನೂನಿಗೆ ಎಲ್ಲರೂ ತಲೆಬಾಗಲೇ ಬೇಕು. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಬಂದಿದ್ದನ್ನು ಧೈರ್ಯವಾಗಿ ಎದುರಿಸಬೇಕು ಎಂದರು. 
  
ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಶ್ರೀರಾಮುಲು, ಸಿದ್ದರಾಮಯ್ಯ ಯಾವಾಗಲೂ ಆಕ್ರಮಣಕಾರಿ, ಪ್ರಚೋದನಕಾರಿಯಾಗಿ ಮಾತನಾಡುತ್ತಾರೆ.  ಇಂತಹ ಹೇಳಿಕೆಗಳಿಂದಲೇ ಅವರ ಮತ್ತೆ ಮುಖ್ಯಮಂತ್ರಿ ಆಗಬೇಕೆಂಬ ಕನಸು ನನಸಾಗದು. ಮೈತ್ರಿ ಸರ್ಕಾರ ಬೀಳಲು ಅವರೇ ಕಾರಣ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video