ಎಚ್.ಡಿ ಕುಮಾರಸ್ವಾಮಿ, 
ರಾಜಕೀಯ

ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಹೆಚ್.ಎಂ.ರೇವಣ್ಣ ಗರಂ

ಮೈತ್ರಿ ಸರ್ಕಾರದ  ಪತನಕ್ಕೆ ಕಾಂಗ್ರೆಸ್ ಕಾರಣ ಎಂದು ಆರೋಪಿಸುತ್ತಿರುವ ಜೆಡಿಎಸ್  ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮಾತಿನಲ್ಲಿ ಯಾವುದೇ ಹುರುಳಿಲ್ಲ. ಚುನಾಯಿತ ಪ್ರತಿನಿಧಿಗಳನ್ನು ಕುಮಾರಸ್ವಾಮಿ ಸರಿಯಾಗಿ ನಡೆಸಿಕೊಂಡಿಲ್ಲದ್ದೇ ಮೈತ್ರಿ ಸರ್ಕಾರದ ಪತನಕ್ಕೆ ಕಾರಣ ಎಂದು ಮೇಲ್ಮನೆ ಕಾಂಗ್ರೆಸ್ ಸದಸ್ಯ .

ನವದೆಹಲಿ: ಮೈತ್ರಿ ಸರ್ಕಾರದ  ಪತನಕ್ಕೆ ಕಾಂಗ್ರೆಸ್ ಕಾರಣ ಎಂದು ಆರೋಪಿಸುತ್ತಿರುವ ಜೆಡಿಎಸ್  ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮಾತಿನಲ್ಲಿ ಯಾವುದೇ ಹುರುಳಿಲ್ಲ. ಚುನಾಯಿತ ಪ್ರತಿನಿಧಿಗಳನ್ನು ಕುಮಾರಸ್ವಾಮಿ ಸರಿಯಾಗಿ ನಡೆಸಿಕೊಂಡಿಲ್ಲದ್ದೇ ಮೈತ್ರಿ ಸರ್ಕಾರದ ಪತನಕ್ಕೆ ಕಾರಣ ಎಂದು ಮೇಲ್ಮನೆ ಕಾಂಗ್ರೆಸ್ ಸದಸ್ಯ ಹೆಚ್.ಎಂ.ರೇವಣ್ಣ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ  ಮೇಲೆ  ಕುಮಾರಸ್ವಾಮಿ ಆರೋಪ ಮಾಡುವುದು ಎಷ್ಟರಮಟ್ಟಿಗೆ ಸರಿ? ಕುಮಾರಸ್ವಾಮಿ ಬಳಿ ನಾನೇ ಏನಾದರೂ  ಕೇಳಿದರೆ ಕೆಲಸ ಮಾಡುತ್ತಿರಲಿಲ್ಲ. ಬರಿ ಅಣ್ಣಾ ಏನಣ್ಣಾ ಎಂದು ಮಾತನಾಡಿ ಹಾಗೆಯೇ  ಕಳುಹಿಸುತ್ತಿದ್ದರು. ಈಗ ತಮ್ಮ  ತಪ್ಪನ್ನು ಸಿದ್ದರಾಮಯ್ಯ ಅವರ ಮೇಲೆ ಹೇರುತ್ತಿರುವುದು  ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದಲ್ಲಿ ಕುಮಾರಸ್ವಾಮಿ ಸರಿಯಾಗಿ ನಡೆದುಕೊಂಡಿದ್ದರೆ ಯಾವುದೇ ತೊಂದರೆ ಆಗುತ್ತಿರಲಿಲ್ಲ. ಕುಮಾರಸ್ವಾಮಿ ನಡವಳಿಕೆ ಬಗ್ಗೆ ಅವರ  ಪಕ್ಷದ  ಪ್ರಮುಖ ನಾಯಕರೇ ಆರೋಪಿಸಿದ್ದಾರೆ.ಅವರಿಗೆ ಜೆಡಿಎಸ್ ಪಕ್ಷದ  ಶಾಸಕರನ್ನೇ ಸರಿಯಾಗಿ  ನಡೆಸಿಕೊಳ್ಳುವುದಕ್ಕೆ ಆಗಲಿಲ್ಲ ಎಂದ ಮೇಲೆ ಇನ್ನೂ ಕಾಂಗ್ರೆಸ್  ಶಾಸಕರೊಂದಿಗಿನ ಅವರ ವರ್ತನೆ ಹೇಗಿರಬಹುದು ಎಂದು ಹೆಚ್.ಎಂ.ರೇವಣ್ಣ ಮಾತಿನ ಚಾಟಿ  ಬೀಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!