ರಾಜಕೀಯ

ಅನರ್ಹರಿಗೆ ಡಿಸಿಎಂ ಶಾಕ್: ಅವರಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದ ಸವದಿ

Manjula VN

ಹುಕ್ಕೇರಿ: ಸುಪ್ರೀಂಕೋರ್ಟ್ ಕ್ಲೀನ್ ಚಿಟ್ ಕೊಡುತ್ತಿದ್ದಂತೆಯೇ ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಗೊಳ್ಳಲು ತುದಿಗಾಲಲ್ಲಿ ನಿಂತಿರುವ ಅನರ್ಹರಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಶಾಕ್ ನೀಡಿದ್ದಾರೆ. 

17 ಅನರ್ಹ ಶಾಸಕರಿಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಲಕ್ಷ್ಮಣ್ ಸವದಿಯವರು ಹೇಳಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. 

ಕಾಂಗ್ರೆಸ್ ಪಕ್ಷ ಹಾಗೂ ಆ ಪಕ್ಷದ ಶಾಸಕರ ನಡುವೆ ನಡೆಯುತ್ತಿರುವ ತಿಕ್ಕಾಟಕ್ಕೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಹೇಳಿದ್ದಾರೆ. 

ಸುಪ್ರೀಂಕೋರ್ಟ್ ಕ್ಲೀನ್ ಚಿಟ್ ನೀಡಿದ ಕೂಡಲೇ ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲು ಚಿಂತಿಸುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಗಂಭೀರವಾಗಿ ಚಿಂತನೆ ನಡೆಸಬೇಕಿದೆ ಎಂದು ತಿಳಿಸಿದ್ದಾರೆ. 

ಅನರ್ಹ ಶಾಸಕರ ಕುರಿತು ಬಿಜೆಪಿ ಚಿಂತೆ ನಡೆಸುವ ಅಗತ್ಯವಿಲ್ಲ. ಅನರ್ಹ ಶಾಸಕರ ಬಗ್ಗೆ ನಾವೇಕೆ ಚಿಂತೆ ಮಾಡಬೇಕು. ಬಿಜೆಪಿಗೆ ಸೇರ್ಪಡೆಗೊಳ್ಳುತ್ತೇವೆಂದು ಈ ವರೆಗೂ ಅವರು ಯಾರೂ ಹೇಳಿಕೆ ನೀಡಿಲ್ಲ. ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸರಗೊಂಡು ಅವರೆಲ್ಲರೂ ರಾಜೀನಾಮೆ ನೀಡಿದ್ದಾರೆ. ಬಳಿಕ ತಮ್ಮ ಪಕ್ಷದ ನಿರ್ಧಾರದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಹೀಗಾಗಿ ಇದು ಆ ಪಕ್ಷದ ಶಾಸಕರು ಹಾಗೂ ಕಾಂಗ್ರೆಸ್'ಗೆ ಸಂಬಂಧಿಸಿದ್ದಾಗಿದೆ. ಇದಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. 

SCROLL FOR NEXT