ಸಂಗ್ರಹ ಚಿತ್ರ 
ರಾಜಕೀಯ

ವಿಡಿಯೋ ತಂದಿಟ್ಟ ಫಜೀತಿ: ಜೆಡಿಎಸ್ ಧ್ವಜ ಹಿಡಿದ ಡಿಕೆಶಿ, ಸಿದ್ದು ಆಪ್ತರ ಸಭೆಯಲ್ಲಿ ಅಸಮಾಧಾನ ಸ್ಪೋಟ!

ದೆಹಲಿಯಿಂದ ನಿನ್ನೆ ನಗರಕ್ಕೆ ಆಗಮಿಸಿದಾಗ ಬೆಂಬಲಿಗರು ನೀಡಿದ ಸ್ವಾಗತದ ವೇಳೆ ಡಿಕೆ ಶಿವಕುಮಾರ್ ಜೆಡಿಎಸ್ ಬಾವುಟ ಹಿಡಿದುಕೊಂಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಆಪ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ದೆಹಲಿಯಿಂದ ನಿನ್ನೆ ನಗರಕ್ಕೆ ಆಗಮಿಸಿದಾಗ ಬೆಂಬಲಿಗರು ನೀಡಿದ ಸ್ವಾಗತದ ವೇಳೆ ಡಿಕೆ ಶಿವಕುಮಾರ್ ಜೆಡಿಎಸ್ ಬಾವುಟ ಹಿಡಿದುಕೊಂಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಆಪ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ತಮ್ಮ ಕಾವೇರಿ ನಿವಾಸದಲ್ಲಿ ಆಪ್ತರ ಜೊತೆ ನಡೆಸಿದ ಸಭೆಯಲ್ಲಿ ಈ ವಿಚಾರ ವನ್ನು ಪ್ರಸ್ತಾಪಿಸಿ ಬೇಸರ ವ್ಯಕ್ತಪಡಿಸಿರುವ ವಿಡಿಯೋವೊಂದು ಭಾರೀ ವಿವಾದಕ್ಕೆ ಕಾರಣ ವಾಗಿದೆ.ಡಿಕೆ ಶಿವಕುಮಾರ್ ಅವರು ಜೆಡಿಎಸ್ ಬಾವುಟ ಹಿಡಿದುಕೊಳ್ಳುವ ಅಗತ್ಯ ಏನಿತ್ತು ಎಂದು ಸಿದ್ದರಾಮಯ್ಯ ಪ್ರಶ್ನಿಸಿರುವುದ್ದು ವಿಡಿಯೋದಲ್ಲಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾಲ್ ಜೈಲಿನಿಂದ ಜಾಮೀನು ಪಡೆದು ಬಿಡುಗಡೆ ಯಾಗಿ ನಗರಕ್ಕೆ ಆಗಮಿಸಿದ ಡಿಕೆ ಶಿವಕುಮಾರ್ ಅವರಿಗೆ ವಿಮಾನ ನಿಲ್ದಾಣದಿಂದ ಕೆಪಿಸಿಸಿ ಕಚೇರಿವರೆಗೆ ನಿನ್ನೆ ಅದ್ಧೂರಿ ಸ್ವಾಗತ ಸಿಕ್ಕಿತ್ತು.ಈ ಸಂದರ್ಭದಲ್ಲಿ ಅವರು ಜೆಡಿಎಸ್ ಬಾವುಟ ಹಿಡಿದುಕೊಂಡಿದ್ದರು.ಈ ಬಗ್ಗೆ ಸಿದ್ದರಾಮಯ್ಯ ಮತ್ತಿತರರು ಅಸಮಾಧಾನ ವ್ಯಕ್ತಪಡಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚೆರ್ಚೆ ಹುಟ್ಟು ಹಾಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್