ಪುಟ್ಟಣ್ಣ 
ರಾಜಕೀಯ

ಯಾರಿಗೆ ನೋವಾದರೂ, ಸತ್ತರೂ ವರಿಷ್ಠರಿಗೆ ಏನೂ ಅನಿಸಲ್ಲ: ಜೆಡಿಎಸ್ ಶಾಸಕ ಪುಟ್ಟಣ್ಣ ಗುಡ್ ಬೈ!

ಜೆಡಿಎಸ್​ ವಿಧಾನ ಪರಿಷತ್​ ಸದಸ್ಯ ಪುಟ್ಟಣ್ಣ   ಪಕ್ಷ ಬಿಡಲು ತೀರ್ಮಾನಿಸಿದ್ದೇನೆ, ಇನ್ನೂ ಹಲವು ಶಾಸಕರು ಪಕ್ಷಾಂತರ ಮಾಡಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. 

ರಾಮನಗರ: ಜೆಡಿಎಸ್​ ಪಕ್ಷದೊಳಗಿನ ರೆಬೆಲ್​ ಶಾಸಕರ ಭಿನ್ನಾಭಿಪ್ರಾಯವನ್ನು ಶಮನಗೊಳಿಸಿ ಮತ್ತೆ ಪಕ್ಷವನ್ನು ಕಟ್ಟುವ ಸಲುವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಶಾಸಕರಿಗೆ ವಿದೇಶ ಪ್ರವಾಸ ಸೇರಿದಂತೆ ಹಲವಾರು ಕಸರತ್ತುಗಳಲ್ಲಿ ತೊಡಗಿರುವ  ದಿನದಲ್ಲಿ ಜೆಡಿಎಸ್​ ವಿಧಾನ ಪರಿಷತ್​ ಸದಸ್ಯ ಪುಟ್ಟಣ್ಣ   ಪಕ್ಷ ಬಿಡಲು ತೀರ್ಮಾನಿಸಿದ್ದೇನೆ, ಇನ್ನೂ ಹಲವು ಶಾಸಕರು ಪಕ್ಷಾಂತರ ಮಾಡಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. 

ಜೆಡಿಎಸ್​ ಪಕ್ಷ ತೊರೆಯುವ ಕುರಿತು ರಾಮನಗರದಲ್ಲಿ ಹೇಳಿಕೆ ನೀಡಿರುವ ಪುಟ್ಟಣ್ಣ, "ಪಕ್ಷದಲ್ಲಿ ಯಾರಿಗೆ ನೋವಾದರೂ, ಯಾರೇ ಸತ್ತರು ವರಿಷ್ಠರಿಗೆ ಏನೂ ಅನಿಸಲ್ಲ. ಹೀಗಾಗಿ ಪಕ್ಷದಲ್ಲಿ ಸಾಕಷ್ಟು ಜನ ಶಾಸಕರು ನೋವು ಅನುಭವಿಸಿದ್ದು, ಬಹುತೇಕ ಎಲ್ಲಾ ಶಾಸಕರೂ ಪಕ್ಷ ತ್ಯಜಿಸುವ ಕುರಿತು ಚರ್ಚೆ ನಡೆಸಿದ್ದೇವೆ. ಹಿರಿಯ ನಾಯಕ ಬಸವರಾಜ ಹೊರಟ್ಟಿ ಜೊತೆಗೂ ಚರ್ಚೆ ಮಾಡಿ ಮುಂದಿನ ನಡೆಯನ್ನು ತೀರ್ಮಾನಿಸಲಾಗುವುದು" ಎಂದು ತಿಳಿಸಿದ್ದಾರೆ.

ಬಸವರಾಜ ಹೊರಟ್ಟಿ ಸೇರಿದಂತೆ ಅನೇಕ ಜೆಡಿಎಸ್​ ವಿಧಾನ ಪರಿಷತ್​ ಸದಸ್ಯರು  ಪಕ್ಷದ ವರಿಷ್ಠರ ವಿರುದ್ಧ ಕಿಡಿಕಾರಿದ್ದು, "ತಮ್ಮನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಲಾಗುತ್ತಿದೆ. ಪಕ್ಷದ ವರಿಷ್ಠರಾದ ಕುಮಾರಸ್ವಾಮಿ ತಮ್ಮ ವಿರುದ್ಧ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ" ಎಂದು ಆರೋಪಿಸಿದ್ದರು.  

ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಿಗೆ ಮತ್ತೋರ್ವ  ಜೆಡಿಎಸ್​ ವಿಧಾನ ಪರಿಷತ್​ ಸದಸ್ಯ ಪುಟ್ಟಣ್ಣ ಬಹಿರಂಗವಾಗಿ ಪಕ್ಷವನ್ನು ತ್ಯಜಿಸುವ ಮಾತನ್ನಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಜೆಡಿಎಸ್​ ಪಕ್ಷದಿಂದ ಸತತ ಮೂರು ಬಾರಿ ಬೆಂಗಳೂರು ಶಿಕ್ಷಣ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್​ಗೆ ಆಯ್ಕೆಯಾಗಿರುವ ಪುಟ್ಟಣ್ಣ ಅವರ ಅವಧಿ 2020ರ ವೇಳೆಗೆ ಅಂತ್ಯವಾಗಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT