ಡಿಕೆ ಶಿವಕುಮಾರ್ ಅಳು ಅನುಕಂಪ ಗಿಟ್ಟಿಸುವ ಕೆಲಸ: ಡಾ.ಅಶ್ವತ್ ನಾರಾಯಣ್
ಮಾಜಿ ಸಚಿವ ಡಿಕೆ ಶಿವಕುಮಾರ್ ಮೊದಲು ರಾಜಕೀಯ ಮಾಡುವುದನ್ನು ಬಿಡಬೇಕು. ಭಾವನಾತ್ಮಕವಾಗಿ ಅಳುವ ಮೂಲಕ ಅನುಕಂಪ ಗಿಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಮೊದಲು ರಾಜಕೀಯ ಮಾಡುವುದನ್ನು ಬಿಡಬೇಕು. ಭಾವನಾತ್ಮಕವಾಗಿ ಅಳುವ ಮೂಲಕ ಅನುಕಂಪ ಗಿಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ತಿರುಗೇಟು ನೀಡಿದ್ದಾರೆ.
ಗೌರಿ- ಗಣೇಶ ಹಬ್ಬದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನ ಚೌಕಟ್ಟಿನಲ್ಲಿ ಡಿಕೆ ಶಿವಕುಮಾರ್ ಮಾಡಿರುವ ಕೆಲಸಗಳ ಬಗ್ಗೆ ಪರಿಶೀಲನೆ ಆಗಬೇಕು ಅದು ಆಗುತ್ತಿದೆ. ಅವರು ಏನು ಮಾಡಿದ್ದಾರೆ, ಏನಾಗಿದೆ, ಏನು ಹೋಗಿದೆ ಎಂಬುದು ಎಲ್ಲವೂ ಸಮಾಜಕ್ಕೆ ತಿಳಿದಿದೆ ಎಂದು ಟಾಂಗ್ ನೀಡಿದರು.
ಡಿಕೆ ಶಿವುಕುಮಾರ್ ಬೆಳೆದು ಬಂದ ರೀತಿ, ಮಾಡಿರುವ ಕಾರ್ಯ ಸಮಾಜಕ್ಕೆ ಗೊತ್ತಿದೆ. ಅವರು ಮಾಡಿರುವ ಕರ್ಮಗಳಿಗೆ ಎಲ್ಲವೂ ರಾಜಿ ಆದರೆ ಜನ ಎಲ್ಲಿಗೆ ಹೋಗಬೇಕು ಎಂದು ಅವರು ಪ್ರಶ್ನಿಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.