ಪ್ರಮೋದ್ ಮಧ್ವರಾಜ್ 
ರಾಜಕೀಯ

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಗೆ ರಾಜೀನಾಮೆ

ಕಳೆದ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಉಡುಪಿ: ಕಳೆದ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮಂಗಳವಾರ ಮಧ್ವರಾಜ್ ತಮ್ಮ ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಲ್ಲಿಸಿದ್ದಾರೆ.

ಪ್ರಮೋದ್ ಮಧ್ವರಾಜ್ ಅವರ ರಾಜೀನಾಮೆ ಪತ್ರವನ್ನು ಅವರ ಅಧಿಕೃತ ಟ್ವೀಟ್ ಖಾತೆಯಲ್ಲಿಯೂ ಹಂಚಿಕೊಂಡಿದ್ದು "ಕಳೆದ ಚುನಾವಣೆಯಲ್ಲಿ ನಾನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೆ.  ಈ ವಿಚಾರವನ್ನು ನಾನು ವರ್ಷ್ಟರಲ್ಲಿ ಸಹ ಚರ್ಚಿಸಿದ್ದೆ. ಆದರೆ ಆ ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟ ಕಾರಣ ನಾನು ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಸ್ಪರ್ಧಿಸಬೇಕಾಯಿತು" ಎಂದಿದ್ದಾರೆ.

"ಇದೀಗ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಅಧಿಕಾರದಲ್ಲಿಲ್ಲದ ಕಾರಣ ನಾನು ಇದುವರೆಗೆ ತಾಂತ್ರಿಕ ಕಾರಣಗಳಿಂದ ಹೊಂದಿದ್ದ ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ ನಿಡುತ್ತಿದ್ದೇನೆ" ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!