ಕುಮಾರಸ್ವಾಮಿ 
ರಾಜಕೀಯ

ಬಿ.ಎಸ್.ಯಡಿಯೂರಪ್ಪ ದುರ್ಬಲ ಮುಖ್ಯಮಂತ್ರಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಲೇವಡಿ

ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರವಾಹಪೀಡಿತ ಪ್ರದೇಶಗಳ ವೀಕ್ಷಣೆಗೆ ಕರೆದೊಯ್ಯಲು ಸಾಧ್ಯವಾಗದ ಬಿ.ಎಸ್. ಯಡಿಯೂರಪ್ಪ ಒಬ್ಬ ದುರ್ಬಲ ಮುಖ್ಯಮಂತ್ರಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಬೆಂಗಳೂರು: ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರವಾಹಪೀಡಿತ ಪ್ರದೇಶಗಳ ವೀಕ್ಷಣೆಗೆ ಕರೆದೊಯ್ಯಲು ಸಾಧ್ಯವಾಗದ ಬಿ.ಎಸ್. ಯಡಿಯೂರಪ್ಪ ಒಬ್ಬ ದುರ್ಬಲ ಮುಖ್ಯಮಂತ್ರಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ರಾಜ್ಯದಲ್ಲಿ ನೆರೆ ಸಂತ್ರಸ್ತರ ಬದುಕು ಮೂರಾಬಟ್ಟೆಯಾಗಿದ್ದರೂ ಪ್ರಧಾನಿಯಾಗಲೀ ಬಿಜೆಪಿಯ ನಾಯಕರಾಗಲೀ ಗಮನ ಹರಿಸಿಲ್ಲ. ಕೇಂದ್ರ ಸರ್ಕಾರದಿಂದ ಪರಿಹಾರ ಕೇಳಲು ಈ ನಾಯಕರಿಗೆ ಗಟ್ಟಿಧ್ವನಿಯಿಲ್ಲದಿರುವುದು, ಮುಖ್ಯಮಂತ್ರಿಗಳು ದುರ್ಬಲರಾಗಿರುವುದು ನಮ್ಮ ರಾಜ್ಯದ ದುರ್ದೈವ ಎಂದು ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಚಂದ್ರಯಾನ-2 ವೀಕ್ಷಣೆಗೆ ಬೆಂಗಳೂರಿಗೆ ನರೇಂದ್ರ ಮೋದಿ ಬಂದು ವಿಜ್ಞಾನಿಗಳಿಗೆ ಆತ್ಮಸ್ಥೈರ್ಯ ತುಂಬಿದ್ದು ಸ್ವಾಗತಾರ್ಹ. ಆದರೆ ನೆರೆಯಿಂದ ತತ್ತರಿಸಿ ಬೀದಿಗೆ ಬಿದ್ದಿರುವ ಸಾವಿರಾರು ಕುಟುಂಬಗಳು, ಮಕ್ಕಳನ್ನು ತಿರುಗಿಯೂ ನೋಡದೇ ಕೇಂದ್ರದಿಂದ ಪರಿಹಾರವನ್ನೂ ಘೋಷಿಸದೇ ಹಾಗೆಯೇ ತೆರಳಿದ್ದು ನೋವಿನ ಸಂಗತಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video