ಡಿಕೆ ಶಿವಕುಮಾರ್ 
ರಾಜಕೀಯ

ಡಿಕೆ ಶಿವಕುಮಾರ್ ಪುತ್ರಿಗೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್!

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿಕೆ ಶಿವಕುಮಾರ್ ಸದ್ಯ ಜಾರಿ ನಿರ್ದೇಶನಾಲಯ(ಇಡಿ) ವಶದಲ್ಲಿದ್ದು ಈ ಮಧ್ಯೆ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಪುತ್ರಿಗೆ ಇಡಿ ನೋಟಿಸ್ ನೀಡಿದೆ. 

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿಕೆ ಶಿವಕುಮಾರ್ ಸದ್ಯ ಜಾರಿ ನಿರ್ದೇಶನಾಲಯ(ಇಡಿ) ವಶದಲ್ಲಿದ್ದು ಈ ಮಧ್ಯೆ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಪುತ್ರಿಗೆ ಇಡಿ ನೋಟಿಸ್ ನೀಡಿದೆ. 

ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಗೆ ಇಡಿ ಅಧಿಕಾರಿಗಳು ಸೆಪ್ಟೆಂಬರ್ 12ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. 

ಇನ್ನು ಸೆಪ್ಟೆಂಬರ್ 13ರಂದು ಡಿಕೆ ಶಿವಕುಮಾರ್ ಅವರ ಇಡಿ ಕಸ್ಟಡಿ ಅಂತ್ಯವಾಗಲಿದೆ.

ಪ್ರತಿದಿನ ಕುಟುಂಬ ಸದಸ್ಯರು ಹಾಗೂ ವಕೀಲರು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ನ್ಯಾಯಾಲಯ ಅವಕಾಶ ಮಾಡಿಕೊಟ್ಟಿದೆ. ಮತ್ತೊಂದೆದೆ ಡಿಕೆ ಶಿವಕುಮಾರ್ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 13ಕ್ಕೆ ನ್ಯಾಯಾಲಯ ಮುಂದೂಡಿದೆ. 

ನ್ಯಾಯಾಲಯದ ತೀರ್ಪಿನಿಂದ ಕಾನೂನು ಸಮರದಲ್ಲಿ ಡಿಕೆ ಶಿವಕುಮಾರ್ ಅವರಿಗೆ ಹಿನ್ನೆಡೆಯಾಗಿತ್ತು. ಹೀಗಾಗಿ ಹತ್ತು ದಿನಗಳ ಕಾಲ ಇಡಿ ವಶದಲ್ಲಿ ಇರಬೇಕಾಗಿ ಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT