ರಾಜಕೀಯ

ಡಿಕೆ ಶಿವಕುಮಾರ್ ಬಂಧನವನ್ನು ರಾಜಕೀಯಗೊಳಿಸಬೇಡಿ: ಬಿಜೆಪಿ ಒಕ್ಕಲಿಗ ನಾಯಕರ ಆಕ್ರೋಶ

Shilpa D

ಬೆಂಗಳೂರು/ಮೈಸೂರು:  ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ  ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ, ಆದರೆ ಈ ಪ್ರತಿಭಟನೆಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿದೆ.

ಪ್ರಮುಖವಾಗಿ ಬಿಜೆಪಿಯ ಒಕ್ಕಲಿಗ ನಾಯಕರು ಡಿಕೆಶಿವಕುಮಾರ್ ಬಂಧನವನ್ನು ರಾಜಕೀಯಗೊಳಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಮಾಜಿ ಸಚಿವ, ಕಾಂಗ್ರೆಸ್ ಸಚಿವ ಡಿಕೆ ಶಿವಕುಮಾರ್  ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದಕ್ಕೆ ಕಾಂಗ್ರೆಸ್  ಪಕ್ಷ ಜಾತಿಯ ಬಣ್ಣ ಬಳಿಯುವುದು ನಾಚಿಕೆಗೇಡಿನ ಸಂಗತಿ ಎಂದು ಕಂದಾಯ ಸಚಿವ ಆರ್ . ಅಶೋಕ್ ಟೀಕಿಸಿದ್ದಾರೆ.

ಮತ್ತೊಬ್ಬ ಒಕ್ಕಲಿಗ ನಾಯಕ ಡಿಸಿಎಂ ಡಾ. ಸಿಎನ್ ಅಶ್ವತ್ಥ ನಾರಾಯಣ ಕಾಂಗ್ರೆಸ್ ವಿರುದ್ದ ಹರಿಹಾಯ್ದಿದ್ದಾರೆ. ಸಮಾಜದಲ್ಲಿ ಭ್ರಷ್ಟಾಚಾರ ತೀವ್ರವಾಗಿದ್ದು, ಜಾತಿ ಮೀರಿ ಭ್ರಷ್ಟಾಚಾರ ವಿರುದ್ದ ಹೋರಾಡಬೇಕಿದೆ. ಡಿ.ಕೆ.ಶಿವಕುಮಾರ್ ಬಂಧನ ವಿಚಾರದಲ್ಲಿ ಸಮಾಜದವರು ಶಾಂತಿಯುತವಾಗಿ ತಮ್ಮ ಭಾವನೆ ವ್ಯಕ್ತಪಡಿಸಲಿ. ಹಿಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಎಷ್ಟರ ಮಟ್ಟಿಗೆ ಭ್ರಷ್ಟಾಚಾರ ವಿರುದ್ದ ಆಡಳಿತ ನಡೆಸಿದ್ದರು? ಈಗ ಜನರಿಗೆ ಹೋರಾಡುವಂತೆ ಕರೆ ಕೊಡುತ್ತಾರೆ. ನಾನು ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಸೇರಿದಂತೆ ಇತರೆ ನಾಯಕರಲ್ಲೂ ಮನವಿ ಮಾಡುತ್ತೇನೆ. ನಮ್ಮೆಲ್ಲರ ಹೋರಾಟ ಭ್ರಷ್ಟಾಚಾರ, ಬೇನಾಮಿ ಆಸ್ತಿ ವಿರುದ್ದ ಇರಬೇಕು ಎಂದು ಹೇಳಿದ್ದಾರೆ.

ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಸತ್ಯಾಸತ್ಯೆಗಳನ್ನು ತಿಳಿದುಕೊಳ್ಳದೇ ಡಿಕೆಶಿ ಬಂಧನವನ್ನು ಭಾವನಾತ್ಮಕ ವಿಷಯವನ್ನಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

SCROLL FOR NEXT