ರಾಜಕೀಯ

ಐಟಿ, ಸಿಬಿಐ, ಇಡಿಯಲ್ಲೂ ಬಿಜೆಪಿ ಸೀಳು ನಾಯಿಗಳಿದ್ದಾರೆ: ಮಾಜಿ ಸಚಿವ ಕೃಷ್ಣಬೇರೇಗೌಡ

Srinivasamurthy VN

ಬೆಂಗಳೂರು: ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಗಳಾದ ಐಟಿ, ಸಿಬಿಐ, ಇಡಿಯಲ್ಲೂ ಬಿಜೆಪಿಯ ಸೀಳು ನಾಯಿಗಳಿದ್ದಾರೆ ಎಂದು ಮಾಜಿ ಸಚಿವ ಕೃಷ್ಣಬೈರೇಗೌಡ ಆರೋಪಿಸಿದ್ದಾರೆ.

ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್‌ ಶಾಸಕ ಡಿ.ಕೆ. ಶಿವಕುಮಾರ್‌ ಅವರ ಬಂಧನ ಖಂಡಿಸಿ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಒಕ್ಕಲಿಗ ಸಮುದಾಯದ ವಿವಿಧ ಸಂಘಟನೆಗಳಿಂದ ಇಂದು  ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. 

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿಯದ್ದು ಹೇಡಿ ರಾಜಕಾರಣ. ಅವರು ನೇರವಾಗಿ ಹೋರಾಟ ಮಾಡಲು ಸಾಧ್ಯವಾಗದೆ, ಪರೋಕ್ಷವಾಗಿ ಹೋರಾಟ ನಡೆಸುತ್ತಿದ್ದಾರೆ. ಚುನಾವಣಾ ರಣರಂಗದಲ್ಲಿ ಪ್ರತಿಪಕ್ಷಗಳನ್ನು ಎದುರಿಸಲಾಗದೇ ವಾಮಮಾರ್ಗದ ಮೂಲಕ ಸರ್ಕಾರಿ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಡಿ.ಕೆ ಶಿವಕುಮಾರ್‌ ಅವರನ್ನು ರಾಜಕೀಯವಾಗಿ ಎದುರಿಸಲಾಗದೇ ಅವರನ್ನು ಬಂಧಿಸಲಾಗಿದೆ. ಶಿವಕುಮಾರ್‌ ಕೇವಲ ಐದು ಕೋಟಿ ರೂ. ಗೆ ಮಾತ್ರ ಲೆಕ್ಕ ಕೊಡಬೇಕು. ಅದಕ್ಕೆ ಅವರು ಲೆಕ್ಕ ಕೊಡುತ್ತಾರೆ. ವಿಜಯಮಲ್ಯ ದೇಶ ಬಿಟ್ಟು ಓಡಿಹೋದಾಗ ಬಿಜೆಪಿಯ ನಾಯಕರು ಎಲ್ಲಿ‌ಹೋಗಿದ್ದರು ಎಂದು ಕೃಷ್ಣಬೈರೇಗೌಡ ಕಿಡಿಕಾರಿದ್ದಾರೆ. 

ಇದೇ ವೇಳೆ ಉಗ್ರಪ್ಪ ಮಾತನಾಡಿ, ಒಕ್ಕಲಿಗರೆಂದರೆ ಒಂದು ಸಮುದಾಯ ಮಾತ್ರವಲ್ಲ.  ಎಲ್ಲಾ ಸಮಾಜದಲ್ಲಿಯೂ ಒಕ್ಕಲಿಗರಿದ್ದಾರೆ. ಒಕ್ಕಲುತನ ಮಾಡುವವರೆಲ್ಲರೂ ಒಕ್ಕಲಿಗರೇ. ಅಮಿತ್‌ ಶಾ ಹಾಗೂ ಮೋದಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದ್ದಾರೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಒಕ್ಕಲಿಗರು ಇಂದು ಪ್ರತಿಭಟನೆಗೆ ಇಳಿದಿದ್ದಾರೆ. ವಿಜಯ ಮಲ್ಯ, ನೀರವ್ ಮೋದಿ, ಚೋಕ್ಸಿ ಮೇಲೆ ಐಟಿ, ಇಡಿ ದಾಳಿ ಏಕೆ ಮಾಡಿಲ್ಲ? ಸಿದ್ಧಾರ್ಥ ಸಾವು ಆತ್ಮಹತ್ಯೆಯಲ್ಲ, ಅದು ಐಟಿ ಇಲಾಖೆ ಮೂಲಕ ಆದ ಕೊಲೆ ಎಂದು ಅವರು ಆರೋಪಿಸಿದರು.

SCROLL FOR NEXT