ಹಿರಿಯ ಕಾಂಗ್ರೆಸ್ ಮುಖಂಡರ 
ರಾಜಕೀಯ

ಜಾರಕಿಹೊಳಿ ಸಹೋದರರ ನಡುವೆ ಮತ್ತೆ ಭುಗಿಲೆದ್ದ ವಾಕ್ ಸಮರ

ಗೋಕಾಕ್ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಸಹೋದರ ಸತೀಶ್ ಜಾರಕಿಹೊಳಿ ನಡುವೆ ಮತ್ತೆ ವಾಕ್ ಸಮರ ಭುಗಿಲೆದಿದ್ದೆ.

ಬೆಳಗಾವಿ: ಗೋಕಾಕ್ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಸಹೋದರ ಸತೀಶ್ ಜಾರಕಿಹೊಳಿ ನಡುವೆ ಮತ್ತೆ ವಾಕ್ ಸಮರ ಭುಗಿಲೆದಿದ್ದೆ.

ಉಪ ಚುನಾವಣೆ ನಡೆದರೆ ಗೋಕಾಕ್ ಕ್ಷೇತ್ರದಿಂದ ಕಿರಿಯ ಸಹೋದರ ಲಖನ್ ಸಹೋದರನನ್ನು ಕಣಕ್ಕಿಳಿಸಲು ಸತೀಶ್ ಜಾರಕಿಹೊಳಿ ನಿರ್ಧರಿಸಿದ್ದಾರೆ.

ಜಾರಕಿಹೊಳಿ ಸಹೋದರರ ನಡುವಿನ ಕೆಟ್ಟ ಪೈಪೋಟಿಗೆ ರಮೇಶ್ ಜಾರಕಿಹೊಳಿ ಸೋದರ ಅಳಿಯ ಅಂಬಿರಾವ್ ಪಾಟೀಲ್ ಕಾರಣರಾಗಿದ್ದು,ಅವರಿಗೆ ಪಾಠ ಕಲಿಸಲು ನಿರ್ಧರಿಸಲಾಗಿದೆ. ಗೋಕಾಕ್ ನಲ್ಲಿ ಅಂಬಿರಾವ್ ಸಾಮ್ರಾಜ್ಯವನ್ನು ನಿರ್ನಾಮ ಮಾಡಲಿದ್ದೇವೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಗೋಕಾಕ್ ಉಪಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆ ಇದ್ದು, ಲಖಾನ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಹೈ ಕಮಾಂಡ್  ಒಪ್ಪಿಗೆ ನೀಡಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. 

ಮತ್ತೊಂದೆಡೆ ಸತೀಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿರುವ ರಮೇಶ್ ಜಾರಕಿಹೊಳಿ, ಗೋಕಾಕ್ ಕ್ಷೇತ್ರದಲ್ಲಿ ಲಖನ್ ಜಾರಕಿಹೊಳಿ ನಿಲ್ಲಿಸುವ ಮೂಲಕ ಅವರ ಭವಿಷ್ಯವನ್ನು ಹಾಳು ಮಾಡಲು ಸತೀಶ್ ಜಾರಕಿಹೊಳಿ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!