ಅನರ್ಹ ಶಾಸಕ ಡಾ. ಸುಧಾಕರ್ 
ರಾಜಕೀಯ

'ನಾಯಕರ ಕೆಟ್ಟ ನಡವಳಿಕೆಯಿಂದ ಕಾಂಗ್ರೆಸ್- ಜೆಡಿಎಸ್ ಎದುರು ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು'

ವೈಯಕ್ತಿಕ ಲಾಲಸೆ, ಕೆಟ್ಟ ನಿರ್ಧಾರಗಳಿಂದ ಕಾಂಗ್ರೆಸ್ ನಾಯಕರಿಗೆ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿತ್ತು ಎಂದು ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ ಸುಧಾಕರ್ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ವೈಯಕ್ತಿಕ ಲಾಲಸೆ, ಕೆಟ್ಟ ನಿರ್ಧಾರಗಳಿಂದ ಕಾಂಗ್ರೆಸ್ ನಾಯಕರಿಗೆ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿತ್ತು ಎಂದು ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ ಸುಧಾಕರ್ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗೆ ತಿರುಗೇಟು ನೀಡಿದ್ದಾರೆ.

ಮಂಗಳವಾರ ಅನರ್ಹ ಶಾಸಕರ ಅರ್ಜಿಯನ್ನು ಸುಪ್ರೀಂಕೋರ್ಟ್ ಮುಂದೂಡಿಕೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿ ದಿನೇಶ್ ಗುಂಡೂರಾವ್, ಕಾಂಗ್ರೆಸ್ ನಲ್ಲಿ ರಾಜರಂತಿದ್ದ ಅನರ್ಹರು ಬಿಜೆಪಿ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸುಧಾಕರ್‌, ನಿಮ್ಮಗಳ ಕೆಟ್ಟ ನಿರ್ಧಾರ ಹಾಗೂ ಬಲಹೀನತೆ ಬಗ್ಗೆ ದಿನೇಶ್ ಗುಂಡೂರಾವ್ ಮೊದಲು ಪರಾಮರ್ಶೆ ಮಾಡಿಕೊಳ್ಳಬೇಕು. ನಾಯಕರ ನಡವಳಿಕೆ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಜೆಡಿಎಸ್ ಎದುರು ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು ಎಂದು ಕಿಡಿಕಾರಿದರು.

ನಾವು ವಿಧಾನಸಭೆ ಚುನಾವಣೆಯಲ್ಲಿ 80 ಸ್ಥಾನ ಗೆದ್ದಿದ್ದೆವು. ಆದರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಗೆದ್ದಿತು.. ಇತಿಹಾಸದಲ್ಲೇ ಕಾಂಗ್ರೆಸ್ ಇಂತಹ ಮುಖಭಂಗ ಅನುಭವಿಸಿರಲಿಲ್ಲ. ನಿಮ್ಮ ಕೆಟ್ಟ ನಿರ್ಧಾರ ಹಾಗೂ ಬಲಹೀನತೆ ಬಗ್ಗೆ ಪರಾಮರ್ಶೆ ಮಾಡಿಕೊಳ್ಳಿ. ನಿಮ್ಮ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video