ರಾಜಕೀಯ

ಅತ್ತ ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ, ಇತ್ತ ಜಮೀರ್ ಅಹ್ಮದ್ ಖಾನ್‍ಗೆ ಸಿಬಿಐ ನೋಟಿಸ್!

Vishwanath S

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಜಮೀರ್  ಅಹ್ಮದ್ ಖಾನ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ.

ನಾಳೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‍ನಲ್ಲಿ ತಿಳಿಸಲಾಗಿದೆ. ಆದರೆ ವೈಯಕ್ತಿಕ ಕಾರಣವನ್ನು ಮುಂದಿಟ್ಟು ನಾಳೆ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಐದು ದಿನ ಕಾಲಾವಕಾಶ ನೀಡಬೇಕು ಎಂದು ಅವರು ಸಿಬಿಐಗೆ ಮನವಿ ಮಾಡಿದ್ದಾರೆ. ಆದರೆ ಸಿಬಿಐ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ. 

ಸಾವಿರಾರು ಮಂದಿ ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ವಂಚನೆ ನಡೆಸಿದ ಐಎಂಎ ಪ್ರಕರಣದ ತನಿಖೆಯನ್ನು ಹಿಂದಿನ ಮೈತ್ರಿ ಸರ್ಕಾರ ವಿಶೇಷ ತನಿಖಾ ತಂಡಕ್ಕೆ ವಹಿಸಿತ್ತು. ಆದರೆ ರಾಜ್ಯದಲ್ಲಿ ನಡೆದ ರಾಜಕೀಯ ಸ್ಥಿತ್ಯಂತರದ ಬಳಿಕ ಮೈತ್ರಿ ಸರ್ಕಾರ ಪತನಗೊಂಡು ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.

SCROLL FOR NEXT