ರಾಜಕೀಯ

'ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು, ಕುಕ್ಕದೇ ಬಿಡುತ್ತಾ?'

Shilpa D

ಬೆಂಗಳೂರು:  ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಘೋಷಣೆ ಪ್ರಕಟವಾದ ಬೆನ್ನಲ್ಲೆ ಮಾಜಿ ಸಿಎಂಗಳ ವಾಕ್ಸಮರ ಆರಂಭವಾಗಿದೆ.

ನಾಲ್ಕು ದಶಕಗಗಳ ರಾಜಕೀಯ ಒಡನಾಟದ ನಂತರವೂ  ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು, ಕುಕ್ಕದೇ ಬಿಡುತ್ತಾ? ಎಂದು ಕಾಂಗ್ರೆಸ್ ಶಾಸಕಾಂಗ ಪುಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರು , ಹಾಗೂ ಮಂಡ್ಯಗಳಲ್ಲಿ ಜೆಡಿಎಸ್ ಸೋಲಿಗೆ ಹಾಗೂ ಕೋಲಾರದಲ್ಲಿ ಕಾಂಗ್ರೆಸ್ ಸೋಲಿಗೆ  ಸಿದ್ದರಾಮಯ್ಯ ಸಾಕಿದ ಮುದ್ದಿನ ಗಿಣಿಗಳೇ ಕಾರಣ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದರು.

ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಸಿದ್ದರಾಮಯ್ಯ, ಹೌದು, ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ, ನನ್ನದೇ ತಪ್ಪು, ನಾಲ್ಕು ದಶಕಗಳ ರಾಜಕೀಯ ಒಟನಾಟದ ಅನುಭವದ ನಂತರವೂ ಹದ್ದನ್ನು ಗಿಣಿಯೆಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು, ಕುಕ್ಕದೇ ಬಿಡುತ್ತಾ? ಅನುಭವಕ್ಕಿಂತ ದೊಡ್ಡ ಪಾಠ ಏನಿದೆ ಹೇಳಿ? ಎಂದು ಟ್ಟಿಟ್ಟರ್ ಮೂಲಕ ತಿರುಗೇಟು ನೀಡಿದ್ದಾರೆ.

SCROLL FOR NEXT