ಸಿದ್ದರಾಮಯ್ಯ-ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ನನ್ನ ಬಗ್ಗೆ ಟೀಕೆ ಮಾಡುವವರಿಗೆ ಯೋಗ್ಯತೆ ಇದೆಯಾ?: ಸಿದ್ದು ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ನನ್ನ ಬಗ್ಗೆ ಟೀಕೆ ಮಾಡುವವರಿಗೆ ಮೊದಲು ಯೋಗ್ಯತೆ ಇದೆಯಾ? ರಾಜ್ಯದ ಇತಿಹಾಸದಲ್ಲಿ ಯಾರೋಬ್ಬ ಮುಖ್ಯಮಂತ್ರಿಗಳು ತಮ್ಮ ರೀತಿ ರೈತರ ಸಾಲಮನ್ನಾ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ  ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ಮಂಡ್ಯ: ನನ್ನ ಬಗ್ಗೆ ಟೀಕೆ ಮಾಡುವವರಿಗೆ ಮೊದಲು ಯೋಗ್ಯತೆ ಇದೆಯಾ? ರಾಜ್ಯದ ಇತಿಹಾಸದಲ್ಲಿ ಯಾರೋಬ್ಬ ಮುಖ್ಯಮಂತ್ರಿಗಳು ತಮ್ಮ ರೀತಿ ರೈತರ ಸಾಲಮನ್ನಾ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ  ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರ ಬಾಚಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಮಾಡಿದ ಸಾಲಮನ್ನಾ ಚೆನ್ನಾಗಿದ್ಯಂತೆ? ನಾನು ಮಾಡಿದ್ದು ಸರಿ ಇಲ್ಲವಂತೆ? ಇದೆಷ್ಟು ಸರಿ. ನನ್ನ ಬಗ್ಗೆ ಟೀಕೆ ಮಾಡುವವರಿಗೆ ಮೊದಲು ಯೋಗ್ಯತೆ ಇದೆಯಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕುಮಾರ್ ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಈ ಬಗ್ಗೆ ನಾನು 14 ತಿಂಗಳ ಸರ್ಕಾರದ ಸಾಧನೆಯನ್ನು ಒಳಗೊಂಡ ಪುಸ್ತಕ ಬಿಡುಗಡೆ ಮಾಡುತ್ತೇನೆ ಎಂದ ಕುಮಾರಸ್ವಾಮಿ,ಮಂಡ್ಯ ಜನ ಸ್ವಾಭಿಮಾನ ಉಳಿಸಿದ್ದರು ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಮಂಡ್ಯ ಜಿಲ್ಲೆಯ ರೈತರ ಕಬ್ಬು ಖರೀದಿ ಮಾಡುವವರು ಯಾರು ಇಲ್ಲ. ಅದರ ಬಗ್ಗೆ ಸಿದ್ದರಾಮಯ್ಯ ಅವರಿಗೆ ಚಿಂತೆ ಇಲ್ಲವೇಕೆ ಎಂದು ಅವರು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಅವರಿಗೆ ಮಂಡ್ಯ ಜಿಲ್ಲೆಯ ರೈತರ ಬಗ್ಗೆ ಕಾಳಜಿ ಇದ್ದರೆ, ಮೊದಲು ಕಟಾವಿಗೆ ಬಂದಿರೋ ಕಬ್ಬನ್ನು ಕಟಾವು ಮಾಡಿ, ಮಾರಾಟ ಮಾಡಿಸಿ ಎಂದು ಅವರು ಸವಾಲು ಹಾಕಿದರು. ನಾನೇನು ಸಿದ್ದರಾಮಯ್ಯ ಅವರಿಗೆ ವಿಶ್ವಾಸ ದ್ರೋಹ ಮಾಡಿಲ್ಲ.ಅದನ್ನು ರಾಜ್ಯದ ಜನ ತೀರ್ಮಾನ ಮಾಡುತ್ತಾರೆ ಎಂದರು.

ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಎಲ್ಲಾ ಪಕ್ಷಗಳಲ್ಲೂ ಇರುತ್ತಾರೆ ಬಿಡಿ ಎಂದು  ಪರೋಕ್ಷವಾಗಿ ಟೀಕಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!