ರಾಜಕೀಯ

ತಂತಿ ಮೇಲೆ ನಡೆಯುತ್ತಿದ್ದೇನೆ: ಸಿಎಂ ಬಿಎಸ್ ಯಡಿಯೂರಪ್ಪ

Srinivasamurthy VN

ದಾವಣಗೆರೆ: ಹಾಲಿ ಕರ್ನಾಟಕ ಸರ್ಕಾರದ ಸಂಕಷ್ಟದ ಕುರಿತು ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ ನಾನು ಕತ್ತಿ ಮೇಲೆ ನಡೆಯುತ್ತಿದ್ದೇನೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ದಾವಣಗೆರೆಯ ಸರ್ಕಾರಿ ಹೈಸ್ಕೂಲ್‌ ಮೈದಾನದಲ್ಲಿ ಭಾನುವಾರ ಬಾಳೆಹೊನ್ನೂರು ರಂಭಾಪುರಿ ಸ್ವಾಮೀಜಿ ಅವರ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ನಾನು ತಂತಿ ಮೇಲೆ ನಡೆಯುತ್ತಿದ್ದೇನೆ. ಯಾವುದೇ ತೀರ್ಮಾನ ಕೈಗೊಳ್ಳಲು 10 ಬಾರಿ ಯೋಚಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದೇ ವೇಳೆ ಸರ್ಕಾರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವಾಗ ಅದು ಬೇರೆ ಸಮಾಜದ ಮೇಲೆ ಬೀರುವ ಪರಿಣಾಮದ ಬಗ್ಗೆ ಯೋಚಿಸಬೇಕಾಗುತ್ತದೆ ಎಂದರು.

ಇನ್ನು ಉಪ ಚುನಾವಣೆ ಟಿಕೆಟ್ ಹಂಚಿಕೆ ವಿಚಾರ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ಹೈ ಕಮಾಂಡ್ ಗೆ ಕಗ್ಗಂಟಾಗಿ ಪರಿಣಮಿಸಿದ್ದು, ಅನರ್ಹ ಶಾಸಕರಿಗೆ ಉಪ ಚುನಾವಣೆ ಟಿಕೆಟ್ ಮತ್ತು ಸ್ಥಾನಮಾನ ನೀಡುವ ಕುರಿತ ವಿಚಾರ ಒಂದೆಡೆಯಾದರೆ ಅನರ್ಹ ಶಾಸಕರ ರಾಜಿನಾಮೆಯಿಂದ ತೆರವಾಗಿರುವ ಸ್ಥಾನಗಳಿಗೆ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಕೂಡ ಬೆಳೆಯುತ್ತಿದೆ. ಟಿಕೆಟ್ ಹಂಚಿಕೆಯೊಂದಿಗೆ ಬಿಜೆಪಿಯಲ್ಲಿ ಆಂತರಿನ ಬಂಡಾಯ ಶಮನ ಮತ್ತು ಅನರ್ಹ ಶಾಸಕರನ್ನೂ ಪರಿಗನಣೆಗೆ ತೆಗೆದುಕೊಳ್ಳಲೇಬೇಕಾದ ಅನಿವಾರ್ಯತೆ ಇದೀಗ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸೃಷ್ಟಿಯಾಗಿದೆ.

SCROLL FOR NEXT