ಪರಿಹಾರ ಸಾಮಾಗ್ರಿಗಳು 
ರಾಜಕೀಯ

ಸರ್ಕಾರದ ಪರಿಹಾರ ಸಾಮಾಗ್ರಿಗಳ ಮೇಲೆ ಪೋಟೋ: ಪ್ರಚಾರ ಗೀಳಿಗೆ ಕುಮಾರಸ್ವಾಮಿ ಕೆಂಡ

ಸಂಕಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ  ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ  ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಬೆಂಗಳೂರು: ಸಂಕಟದಿಂದ ಹೇಗೆ ಪಾರಾಗುವುದೆಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ  ನಾಯಕರುಗಳು ಸರಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ  ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದೇನು ಜನಸಾಮಾನ್ಯರಿಗೆ ಸರಕಾರ ನೀಡುವ ಪರಿಹಾರ ಸಾಮಗ್ರಿಯೋ? ಬಿಜೆಪಿ ಪಕ್ಷದ ಕೊಡುಗೆಯೋ? ಅಥವಾ ಲಿಂಬಾವಳಿಯವರ  ವೈಯಕ್ತಿಕ ದಾನವೋ? ಅಥವಾ ಲಜ್ಜೆಗೇಡಿ ರಾಜಕಾರಣವೋ? ಪ್ರಧಾನಿ ಮೋದಿ ಮತ್ತು ಸನ್ಮಾನ್ಯ ಯಡಿಯೂರಪ್ಪ ಉತ್ತರ ಹೇಳುವರೇ? ಎಂದು ಕುಟುಕಿದ್ದಾರೆ.

ಒಂದು ಸಮುದಾಯವನ್ನು ಕೊರೋನ ಮಹಾಮಾರಿಗೆ ಸಮೀಕರಿಸುವವರ ಬಗ್ಗೆ ದಿವ್ಯ ಮೌನ ತಳೆದ  ಪ್ರಧಾನಿಗಳು ಬಡ ಕಾರ್ಮಿಕರ ಪರಿಹಾರ ಸಾಮಗ್ರಿಯನ್ನು ಕೆಲ ಪ್ರಚಾರಪ್ರಿಯರು ತಮ್ಮ ಫೋಟೋ  ಸ್ಟಿಕರ್ ಅಂಟಿಸಿ ನೀಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ