ರಾಜಕೀಯ

ಹಸಿದ ಹೊಟ್ಟೆಗಳಿಗೆ ಜಾತಿ, ಧರ್ಮ, ಊರು ಮುಖ್ಯವೇ?: ಸಿದ್ದರಾಮಯ್ಯ ಪ್ರಶ್ನೆ

ನಗರದ ಕೆಲವು ಬಿಜೆಪಿ ಶಾಸಕರು ಮತ್ತು ಬಿಬಿಎಂಪಿ ಸದಸ್ಯರು ಜಾತಿ-ಧರ್ಮಗಳನ್ನು ವಿಚಾರಿಸಿ ಜನರಿಗೆ ಆಹಾರ ಪೊಟ್ಟಣಗಳನ್ನು ವಿತರಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಹಸಿದ ಹೊಟ್ಟೆಗಳಿಗೆ ಈ ಸಂದರ್ಭದಲ್ಲಿ ಆಹಾರ ಮುಖ್ಯವೇ ಹೊರತು ಜಾತಿ, ಧರ್ಮ ಊರುಗಳಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರು: ನಗರದ ಕೆಲವು ಬಿಜೆಪಿ ಶಾಸಕರು ಮತ್ತು ಬಿಬಿಎಂಪಿ ಸದಸ್ಯರು ಜಾತಿ-ಧರ್ಮಗಳನ್ನು ವಿಚಾರಿಸಿ ಜನರಿಗೆ ಆಹಾರ ಪೊಟ್ಟಣಗಳನ್ನು ವಿತರಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಹಸಿದ ಹೊಟ್ಟೆಗಳಿಗೆ ಈ ಸಂದರ್ಭದಲ್ಲಿ ಆಹಾರ ಮುಖ್ಯವೇ ಹೊರತು ಜಾತಿ, ಧರ್ಮ ಊರುಗಳಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಸರ್ಕಾರದ ಮುಖ್ಯಮಂತ್ರಿ ಮತ್ತು ಸಚಿವರುಗಳ ಗಮನಕ್ಕೆ ತಂದಿರುವ ಅವರು, ಆಹಾರ ಸಾಮಗ್ರಿ ವಿತರಣೆ ಹೊಣೆಯನ್ನು ಹಲವು ಕಡೆ ಬಿಜೆಪಿ ಆರ್ ಎಸ್ಎಸ್ ಗೆ ಸೇರಿದ ಸಂಸ್ಥೆಗಳಿಗೆ ನೀಡುತ್ತಿದೆ ಎಂಬ ಆರೋಪಗಳು ಸಹ ಬಂದಿವೆ. ಈ ಮೂಲಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಭದ್ರತಾ ಮಂಡಳಿಯ ನಿಧಿಯಲ್ಲಿನ ರೂ.8000 ಕೋಟಿಯನ್ನು ಈ ಸಂಸ್ಥೆಗಳಿಗೆ ಧಾರೆಯೆರೆಯಲು ಸರ್ಕಾರ ಹೊರಟಂತಿದೆ ಎಂದಿದ್ದಾರೆ.

ಕಾರ್ಮಿಕ ಇಲಾಖೆಯ ಆಹಾರ ವಿತರಣೆಯ ಯೋಜನೆಯಲ್ಲಿ ಕಾರ್ಮಿಕರ ಜೊತೆ ಸಂಬಂಧ ಇಲ್ಲದ ಸಂಸ್ಥೆಗಳಿಗೆ ಕೊಟ್ಟಿರುವ ಜವಾಬ್ದಾರಿಯನ್ನು ಹಿಂದಕ್ಕೆ ಪಡೆದು ಇಂದಿರಾ ಕ್ಯಾಂಟೀನ್ ಮೂಲಕ ಅಧಿಕೃತ ಕಾರ್ಮಿಕ ಸಂಘಗಳ ಸಹಯೋಗದೊಡನೆ ಮುಂದುವರೆಸಬೇಕೆಂದು ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾರಿಗೆ ಯಾವ ಜಿಲ್ಲೆಯ ಜವಾಬ್ದಾರಿ?: ರಾಜ್ಯದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿ ಸಿಎಂ ಡಿಕೆ ಶಿವಕುಮಾರ್ ಆದೇಶ! ಆದ್ರೆ..

ಬಿಜೆಪಿಯ ಸಕ್ರಿಯ ಸದಸ್ಯತ್ವ ಪಡೆದ ರಾಜನಾಥ್ ಸಿಂಗ್ 2ನೇ ಪುತ್ರನಿಗೆ ಉಪಾಧ್ಯಕ್ಷ ಹುದ್ದೆ!

ತುಂಗಭದ್ರೆಗೆ ಹೊಸ ಕಳೆ; ನೂತನ 33 ಕ್ರೆಸ್ಟ್ ಗೇಟ್‌ಗಳ ಲೋಕಾರ್ಪಣೆ: ಒಂದೇ ವೇದಿಕೆಯಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು..!

Venezuela Earth quake: ನೆರವಿಗೆ ಧಾವಿಸಿದ ಅಮೆರಿಕ, ಟ್ರಂಪ್ ಆರ್ಥಿಕ ನೆರವು ಘೋಷಣೆ

Venezuela Earth quake: 40 ಸೆಕೆಂಡ್​​ ನಲ್ಲಿ 2 ಬಾರಿ ಭೂಕಂಪ, ಭಾರೀ ವಿನಾಶ, ಕನಿಷ್ಠ 32 ಸಾವು, ಸಾವಿನ ಸಂಖ್ಯೆ 1 ಲಕ್ಷಕ್ಕೇರುವ ಸಾಧ್ಯತೆ!