ಡಿಕೆ ಶಿವಕುಮಾರ್-ಬಿಸಿ ಪಾಟೀಲ್ 
ರಾಜಕೀಯ

ಈಗ ರಾಜಕೀಯ ಮಾಡುವ ಸಮಯವಲ್ಲ: ಕೊರೊನಾ ಯುದ್ಧ ಕಾಲ: ಡಿಕೆಶಿಗೆ ಬಿಸಿ ಪಾಟೀಲ್ ತಿರುಗೇಟು

ಈಗ ಯಾರೂ ರಾಜಕೀಯ ಮಾಡುವ ಸಮಯವಲ್ಲ.‌ ಕೊರೊನಾ ಮಹಾಮಾರಿ ವಿರುದ್ಧ ಯುದ್ಧ ಮಾಡುವ ಸಮಯ, ಇಂಥ ಸಂದಿಗ್ಧ ಕಾಲದಲ್ಲಿಯೂ ವಿರೋಧ ಪಕ್ಷದವರು ಅನಗತ್ಯ ಟೀಕೆ - ಟಿಪ್ಪಣಿ ಮಾಡುವುದು ಬೇಸರದ ಸಂಗತಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿಷಾದ ಪಡಿಸಿದರು.

ಚಿತ್ರದುರ್ಗ: ಈಗ ಯಾರೂ ರಾಜಕೀಯ ಮಾಡುವ ಸಮಯವಲ್ಲ.‌ ಕೊರೊನಾ ಮಹಾಮಾರಿ ವಿರುದ್ಧ ಯುದ್ಧ ಮಾಡುವ ಸಮಯ, ಇಂಥ ಸಂದಿಗ್ಧ ಕಾಲದಲ್ಲಿಯೂ ವಿರೋಧ ಪಕ್ಷದವರು ಅನಗತ್ಯ ಟೀಕೆ - ಟಿಪ್ಪಣಿ ಮಾಡುವುದು ಬೇಸರದ ಸಂಗತಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿಷಾದ ಪಡಿಸಿದರು.

ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.‌ಶಿವಕುಮಾರ್ ಮಾಡುತ್ತಿರುವ ಟೀಕೆಗಳ ಬಗ್ಗೆ ಅವರು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. ಕೊರೊನಾ ವೈರಸ್ ಹಬ್ಬದಂತೆ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯ ಕೈಗೊಂಡಿವೆ. ಇಂಥ ಸಂದರ್ಭದಲ್ಲಿಯೂ ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಪರಿಶ್ರಮ ವಹಿಸಲಾಗಿದೆ ಎಂದವರು ವಿವರಿಸಿದರು. ಬಿಜೆಪಿ‌ ಸರ್ಕಾರ ಕಂಗೆಡದೆ ಪರಿಸ್ಥಿತಿಯನ್ನು‌ ನಿಭಾಯಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರಿಗೆ ತಿರುಗೇಟು ನೀಡಿದರು.

ಗಂಗಾವತಿ ಭಾಗದಲ್ಲಿ ಪ್ರಾಕೃತಿಕ ವಿಕೋಪದಿಂದ ಆದ ಬೆಳೆ ನಷ್ಟಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಪರಿಹಾರ ಬಿಡುಗಡೆ ಮಾಡಿದ್ದಾರೆ.‌ ಸಬ್ಸಿಡಿ ದರದಲ್ಲಿ ಬಿತ್ತನೆಬೀಜ - ರಸಗೊಬ್ಬರ ಲಭ್ಯವಾಗುವಂತೆ ಮಾಡಿದ್ದಾರೆ. ರಾಜ್ಯಾದ್ಯಂತ ಇವುಗಳ ಪೂರೈಕೆಗೆ ಕಿಂಚಿತ್ತೂ ತೊಂದರೆಯಾಗಿಲ್ಲ. ಕೃಷಿಯುತ್ಪನ್ನಗಳ ಸಾಗಣೆ - ಮಾರಾಟಕ್ಕೆ ಅಡ್ಡಿಯಾಗದಂತೆ ನೋಡಿಕೊಂಡಿದ್ದೇವೆ.

ಅತ್ಯವಶ್ಯಕ ವಸ್ತುಗಳ ಪೂರೈಕೆಗೆ ತೊಂದರೆಯಾಗಿಲ್ಲ. ಹಾಲನ್ನು ಸರ್ಕಾರವೇ ಖರೀದಿಸಿ ಸಾರ್ವಜನಿಕರಿಗೆ ಉಚಿತವಾಗಿ ಪೂರೈಕೆ ಮಾಡುತ್ತಿದೆ. ಸರ್ಕಾರ ವಹಿಸಿರುವ ಇಷ್ಟೆಲ್ಲ ಮುತುವರ್ಜಿ, ಕಾರ್ಯ ತತ್ಪರತೆ ನೋಡಿ ಕೆಪಿಸಿಸಿ ಅಧ್ಯಕ್ಷರ ಕಣ್ಣು ಕೆಂಪಗಾಗಿದೆ. ತಮ್ಮ ಅಸಹನೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಸಚಿವರು ಹೇಳಿದರು.

ಕೊರೊನಾ ಮಹಾಮಾರಿಯನ್ನು ಎಲ್ಲರೂ ಪಕ್ಷಭೇದ ಮರೆತು ಎದುರಿಸಬೇಕಾಗಿದೆ. ಇಂಥ ಸಮಯ ಯಾರೂ ರಾಜಕೀಯ ಮಾಡಬಾರದು ಎಂದವರು‌ ಸಲಹೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್