ಬಿಎಸ್ ಯಡಿಯೂರಪ್ಪ 
ರಾಜಕೀಯ

ಮೇ 15ರವರೆಗೆ ಲಾಕ್ ಡೌನ್ ಮುಂದುವರಿಕೆ ಸಾಧ್ಯತೆ: ಸಿಎಂ ಬಿಎಸ್ ಯಡಿಯೂರಪ್ಪ

ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಜಾರಿಗೊಳಿಸಿರುವ ಲಾಕ್‌ ಡೌನ್ ಅನ್ನು ಮೇ.15ರ ವರೆಗೆ ಮುಂದುವರೆಸಬೇಕಾಗಬಹುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸುಳಿವು ನೀಡಿದ್ದಾರೆ. 

ಬೆಂಗಳೂರು: ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಜಾರಿಗೊಳಿಸಿರುವ ಲಾಕ್‌ ಡೌನ್ ಅನ್ನು ಮೇ.15ರ ವರೆಗೆ ಮುಂದುವರೆಸಬೇಕಾಗಬಹುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸುಳಿವು ನೀಡಿದ್ದಾರೆ. 

ಇಂದು ಪ್ರಧಾನಿ ನರೇಂದ್ರ ಮೋದಿ ನಡೆಸಿದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗಿನ‌ ವಿಡಿಯೋ ಸಂವಾದದಲ್ಲಿ ಯಡಿಯೂರಪ್ಪ ಪಾಲ್ಗೊಂಡಿದ್ದರು. ಬಳಿಕ ಯಡಿಯೂರಪ್ಪ ಮಾತನಾಡಿ,ಪ್ರಧಾನಿ ನರೇಂದ್ರ ಮೋದಿ ಕೊರೋನಾ ನಿಯಂತ್ರಣ ಲಾಕ್ ಡೌನ್ ಪರಿಸ್ಥಿತಿ ರಾಜ್ಯದ ಸ್ಥಿತಿಗತಿಗಳ ಬಗ್ಗೆ ವಿಡಿಯೋ ಸಂವಾದ ನಡೆಸಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.ರಾಜ್ಯದಲ್ಲಿ ಸೋಂಕು ಹರಡದಂತೆ ಎಲ್ಲಾ ರೀತಿಯ ಕ್ರಮಕೈಗೊಂಡಿದ್ದೇವೆ. ಮುಂದೆಯೂ ಇವುಗಳನ್ನು ವಿಸ್ತರಿಸುತ್ತೇವೆ. ಹೀಗಾಗಿ ಮೇ 3ರ ಬಳಿಕವೂ ಎರಡು ವಾರಗಳ ಕಾಲ‌ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದರು. 

ಮೇ 15ರ ವರೆಗೂ ಲಾಕ್‌ಡೌನ್ ಇರಲಿದೆ. ಇನ್ನೂ ವಲಯವಾರು ವಿನಾಯಿತಿ ಬೇಕು ಎಂಬ ರಾಜ್ಯ ಸರ್ಕಾರದ ಅಭಿಪ್ರಾಯಕ್ಕೆ ತಕ್ಷಣಕ್ಕೆ ಪ್ರಧಾನಿ ಕಡೆಯಿಂದ ಯಾವುದೇ ಉತ್ತರ ಇಲ್ಲ. ಆದರೆ, ಮೋದಿ ಅವರ ನಿರ್ಧಾರಕ್ಕೆ ಸಂಪೂರ್ಣ ಬೆಂಬಲ ಇದೆ ಎಂದರು.
ಸಚಿವರಾದ ಬಸವರಾಜ ಬೊಮ್ಮಾಯಿ, ಶ್ರೀರಾಮುಲು, ಕೆ ಸುಧಾಕರ್, ಸುರೇಶ್ ಕುಮಾರ್, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ ಭಾಸ್ಕರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!