ರಾಜಕೀಯ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಕೊರೋನಾ, ಸಂಪುಟ ವಿಸ್ತರಣೆ ವಿಳಂಬ

Nagaraja AB

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ನಂತರ ಸೋಮವಾರ
ಆಸ್ಪತ್ರೆಗೆ ದಾಖಲಾಗಿದ್ದು, ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬವಾಗಿದ್ದು, ಅನೇಕ ಬಿಜೆಪಿ ನಾಯಕರು ಇಟ್ಟುಕೊಂಡಿದ್ದ
ಭರವಸೆಗಳಿಗೆ ತಣ್ಣೀರು ಎರಚಿದೆ.

ಜೂನ್ ತಿಂಗಳಲ್ಲಿ ಮೇಲ್ಮನೆ ಸದಸ್ಯರಾಗಿ ಆಯ್ಕೆಯಾಗಿದ್ದ ಎಂಟಿಬಿ ನಾಗರಾಜ್, ಆರ್. ಶಂಕರ್, ಸುನೀಲ್ ವಲ್ಲಾಪುರ, ಮತ್ತು ಪ್ರತಾಪ್ ಸಿಂಹ ನಾಯಕ್, ಕಳೆದ ತಿಂಗಳು ಎ.ಎಚ್ ವಿಶ್ವನಾಥ್, ಭಾರತಿ ಶೆಟ್ಟಿ, ಶಾಂತರಾಮ್ ಬುಡ್ನಾ ಸಿದ್ಧಿ, ಸಿ. ಪಿ. ಯೋಗೇಶ್ವರ್ ಮತ್ತು ತಳವಾರ್ ಸಾಬಣ್ಣ ವಿಧಾನಪರಿಷತ್ತಿಗೆ ನಾಮನಿರ್ದೇಶನಗೊಂಡಿದ್ದರು.

ಸಂಪುಟ ವಿಸ್ತರಣೆ ಕುರಿತು ಪಕ್ಷದ ಹೈಕಮಾಂಡ್ ಜೊತೆಗೆ ಚರ್ಚಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ವಾರ
ನವೆದೆಹಲಿಗೆ ಹೋಗಲಿದ್ದಾರೆ ಎಂಬ ಮಾತುಗಳು ಕೇಳಿಬರುತಿತ್ತು. ಆದರೆ, ಇದೀಗ ಕೋವಿಡ್-19 ಕಾರಣದಿಂದಾಗಿ ಕೆಲದಿನಗಳ ಮಟ್ಟಿಗೆ ಮುಖ್ಯಮಂತ್ರಿ ಏಲ್ಲಿಗೂ ಪ್ರಯಾಣ ಮಾಡದಂತಾಗಿದೆ.

ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಸಚಿವೆ ಶಶಿಕಲಾ ಜೊಲ್ಲೆ ಇತ್ತೀಚಿಗೆ ನವದೆಹಲಿಗೆ ಭೇಟಿ ನೀಡಿ, ತಮ್ಮ ಖುರ್ಚಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸಚಿವರನ್ನು ಕಸರತ್ತು ನಡೆಸಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ, ಸಚಿವರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದಾಗಿ ಅವರು ಹೇಳಿಕೊಳ್ಳುತ್ತಿದ್ದಾರೆ.

SCROLL FOR NEXT