ಶೋಭಾ ಕರಂದ್ಲಾಜೆ ಟ್ವೀಟ್ 
ರಾಜಕೀಯ

ರಾಮನಿಗಿಂತ ಮೋದಿಯೇ ದೊಡ್ಡವರೇ? ಶಿಲಾನ್ಯಾಸದ ಬೆನ್ನಲ್ಲೇ ಚರ್ಚೆಗೆ ಗ್ರಾಸವಾದ ಟ್ವೀಟ್!

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಕೋಟ್ಯಂತರ ಮನಗಳ ಆಶಯ ತಣಿಸಿದ್ದಾರೆ.

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಕೋಟ್ಯಂತರ ಮನಗಳ ಆಶಯ ತಣಿಸಿದ್ದಾರೆ.

ಇದೇ ಹೊತ್ತಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಬುಧವಾರ ಭೂಮಿಪೂಜೆ ನಡೆಯುವುದಕ್ಕೂ ಮೊದಲು, ಸಂಸದೆ ಶೋಭಾ ಕರಂದ್ಲಾಜೆ ಅವರು ಮಾಡಿರುವ ಟ್ವೀಟ್‌ವೊಂದು ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. 

ಅಯೋಧ್ಯೆ ತನ್ನ ಪ್ರೀತಿಯ ರಾಜನನ್ನು ಮರಳಿ ಮನೆಗೆ ಸ್ವಾಗತಿಸಲು ಸಜ್ಜಾಗಿದೆ! ಎಂಬ ಸಾಲುಗಳ ಮೂಲಕ ಶೋಭಾ ಕರಂದ್ಲಾಜೆ ಅವರು ಚಿತ್ರವೊಂದನ್ನು ಹಂಚಿಕೊಂಡಿದ್ದರು. ಚಿತ್ರದಲ್ಲಿ, ಮೋದಿ ರಾಮನ ಕೈಹಿಡಿದು ದೇಗುಲಕ್ಕೆ ಕರೆದುಕೊಂಡು ಹೋಗುತ್ತಿರುವಂತೆ ಬಿಂಬಿಸಲಾಗಿದೆ. ಆದರೆ, ಚಿತ್ರದಲ್ಲಿ ರಾಮನನ್ನು ಬಾಲಕನನ್ನಾಗಿಯೂ, ಪ್ರಧಾನಿ ಮೋದಿಯವರನ್ನು ಹಿರಿಯರಂತೆಯೂ ತೋರಿಸಲಾಗಿದೆ.

ಈ ಚಿತ್ರ ಸದ್ಯ ಸಾಮಾಜಿಕ ತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮೋದಿ ರಾಮನಿಗಿಂತಲೂ ದೊಡ್ಡವರೇ? ಮೋದಿ ರಾಮನನ್ನು ಮೀರಿದವರೇ ಎಂಬಿತ್ಯಾದಿ ಪ್ರಶ್ನೆಗಳು ಕೇಳಿಬಂದಿವೆ. ಅಲ್ಲದೆ, ಚಿತ್ರವನ್ನು ಅಳಿಸುವಂತೆಯೂ ಹಲವರು ಸಲಹೆ ನೀಡಿದ್ದಾರೆ. ಕೆಲ ಮಂದಿ ಚಿತ್ರವನ್ನು ಮೆಚ್ಚಿದ್ದಾರೆ. ಆದರೆ, ಬಹುತೇಕರು ಚಿತ್ರದ ಸನ್ನಿವೇಶವನ್ನು ವಿರೋಧಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್