ರಾಜಕೀಯ

ಕಾಂಗ್ರೆಸ್-ಜೆಡಿಎಸ್ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗಕ್ಕೆ ಲಗ್ಗೆಯಿಡಲು ಬಿಜೆಪಿ ಕಾರ್ಯತಂತ್ರ

Sumana Upadhyaya

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ನ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗಕ್ಕೆ ನಿಧಾನವಾಗಿ ಲಗ್ಗೆಯಿಡಲು ಬಿಜೆಪಿ ಯತ್ನಿಸುತ್ತಿದೆ. ಒಕ್ಕಲಿಗ ಸಮುದಾಯ ಹೆಚ್ಚಾಗಿರುವ ಈ ಭಾಗದಲ್ಲಿ ತನ್ನ ಪ್ರಾಬಲ್ಯವನ್ನು ತೋರಿಸಲು ಪಕ್ಷ ಸಿದ್ದತೆ ಮಾಡಿಕೊಳ್ಳುತ್ತಿದೆ.

ಹಳೆ ಮೈಸೂರು ಭಾಗದ ಬಗ್ಗೆ, ಕರ್ನಾಟಕ ಬಿಜೆಪಿಯಲ್ಲಿ ಆಯ್ಕೆಗೊಂಡಿರುವ ನೂತನ ಪದಾಧಿಕಾರಿಗಳ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಇತ್ತೀಚೆಗೆ ಪ್ರಸ್ತಾಪ ಮಾಡಿದ್ದರು. ಇಂದು ಬಿಜೆಪಿ ರಾಜ್ಯಾಧ್ಯಕ್ಷ ನವೀನ್ ಕುಮಾರ್ ಕಟೀಲ್ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಲಿದ್ದು ಹಳೆ ಮೈಸೂರು ಸೇರಿದಂತೆ ಬಿಜೆಪಿ ಶಕ್ತಿ ಕಡಿಮೆಯಿರುವ ಕಡೆಗಳಲ್ಲಿ ಪ್ರಾಬಲ್ಯ ಮೆರೆಯಲು ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸಲಿದ್ದಾರೆ. ತನ್ನ ಘಟಕವನ್ನು ಮರು ರಚನೆ ಮಾಡಿ ಬೂತ್ ಮಟ್ಟದ ಕಾರ್ಯಕರ್ತರನ್ನು ಕೆಲಸ ಮಾಡುವಂತೆ ಹುರಿದುಂಬಿಸಲು ನಾಯಕರು ಮುಂದಾಗಿದ್ದಾರೆ.

ಸದ್ಯ ಬಿಜೆಪಿಗೆ ಪಂಚಾಯತ್ ಅಥವಾ ವಾರ್ಡ್ ಮಟ್ಟದಲ್ಲಿ ಅಷ್ಟೊಂದು ಬೆಂಬಲವಿಲ್ಲ. ಬಿಜೆಪಿ 25 ಲೋಕಸಭಾ ಸ್ಥಾನ ಮತ್ತು ಕಳೆದ ಕೆ ಆರ್ ಪೇಟೆ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಗೆದ್ದಿದ್ದರೂ ಕೂಡ 69 ಕ್ಷೇತ್ರಗಳಲ್ಲಿ ಸಾಧನೆ ಕಳಪೆಯಾಗಿದೆ. ಈ ಪ್ರದೇಶಗಳಲ್ಲಿ ಬಿಜೆಪಿ ಮುಂದಿನ ದಿನಗಳಲ್ಲಿ ಹೆಚ್ಚು ಒತ್ತು ಕೊಡಬೇಕು ಎಂದು ನಡ್ಡಾ ಇತ್ತೀಚೆಗೆ ಸಭೆಯಲ್ಲಿ ಹೇಳಿದ್ದಾರೆ.

SCROLL FOR NEXT