ರಾಮಲಿಂಗಾ ರೆಡ್ಡಿ 
ರಾಜಕೀಯ

ಆರ್'ಎಸ್ಎಸ್, ಸಂಘ ಪರಿವಾರ, ಎಸ್ ಡಿಪಿಐ ಎಲ್ಲವೂ ಒಂದೇ ನಾಣ್ಯದ ಎರಡು ಮುಖಗಳು: ರಾಮಲಿಂಗಾ ರೆಡ್ಡಿ

ಆರ್ ಎಸ್ ಎಸ್, ಸಂಘ ಪರಿವಾರ ಎಸ್ಡಿಪಿಐ ಎಲ್ಲವೂ ಒಂದೇ. ಅವರು ಒಂದೇ ನಾಣ್ಯದ ಮುಖಗಳಿದ್ದಂತೆ. ಹೆಡ್, ಟೈಲ್ ಎರಡೂ ಅವರೇ ಆಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಏನ್ಮಾಡಿದ್ದರು. ಬೆಂಗಳೂರಿನಲ್ಲಿ ಏನು ಮಾಡುತ್ತಿದ್ದಾರೆಂದು ನಮಗೂ ತಿಳಿದಿದೆ.

ಬೆಂಗಳೂರು: ಆರ್ ಎಸ್ ಎಸ್, ಸಂಘ ಪರಿವಾರ ಎಸ್ಡಿಪಿಐ ಎಲ್ಲವೂ ಒಂದೇ. ಅವರು ಒಂದೇ ನಾಣ್ಯದ ಮುಖಗಳಿದ್ದಂತೆ. ಹೆಡ್, ಟೈಲ್ ಎರಡೂ ಅವರೇ ಆಗಿದ್ದಾರೆ. ದಕ್ಷಿಣ ಕನ್ನಡದಲ್ಲಿ ಏನ್ಮಾಡಿದ್ದರು. ಬೆಂಗಳೂರಿನಲ್ಲಿ ಏನು ಮಾಡುತ್ತಿದ್ದಾರೆಂದು ನಮಗೂ ತಿಳಿದಿದೆ. ನಾನು ಸಹ ರಾಜ್ಯದ ಗೃಹ ಸಚಿವನಾಗಿ ಕೆಲಸ ಮಾಡಿದ್ದೇನೆ. ತಮಗೂ ಇದರ ಬಗ್ಗೆ ಮಾಹಿತಿ ಇದೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. 

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡು ಬಿಜೆಪಿಯ ಆಡಳಿತದಲ್ಲಿವೆ. ತಕ್ಷಣವೇ ಎಸ್ ಡಿಪಿಐ ಬ್ಯಾನ್ ಮಾಡಲಿ. ರಾಜ್ಯ ಸರ್ಕಾರಕ್ಕೆ ಸ್ವತಃ ಪೊಲೀಸ್ ಠಾಣೆ ಹಾಗೂ ಪೊಲೀಸರನ್ನು ರಕ್ಷಣೆ ಮಾಡಲಿಕ್ಕೆ ಸಾಧ್ಯವಾಗಿಲ್ಲ ಇನ್ನು ರಾಜ್ಯವನ್ನು ರಕ್ಷಣೆ ಮಾಡುತ್ತಾರೆಯೇ ಎಂದು ಖಾರವಾಗಿಯೇ ಎಂದು ಅವರು ಪ್ರಶ್ನಿಸಿದ್ದಾರೆ. 

ಎಸ್ ಡಿಪಿಐ ಕಾಂಗ್ರೆಸ್ ಪಕ್ಷದ ಮತ ಬ್ಯಾಂಕ್ ಎನ್ನುತ್ತಾರೆ ಅದರಿಂದ ನಮಗೆ ತಾನೆ ಹಾನಿ ಹಾಗಿದ್ದರೆ ಪಿಎಫ್ ಐ ,ಎಸ್ ಡಿಪಿಐ ಸಂಘಟನೆನ್ನು ಬ್ಯಾನ್ ಮಾಡಿ. ಇದರಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ನೀವು ಆ ಸಂಘಟನೆಗಳನ್ನು ಬ್ಯಾನ್ ಮಾಡಿದರೆ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ಕಾಂಗ್ರೆಸ್ ಪಕ್ಷದ ಮತಗಳೇ ಹರಿದು ಹಂಚಿಹೋಗು ವುದು. ಕಾಂಗ್ರೆಸ್ ಮತ ಬ್ಯಾಂಕ್ ಗಿಂತ ಬಿಜೆಪಿಯವರ ರಾಜಕೀಯ ಹಾಗೂ ಸಾಮಾಜಿಕ ಹಿತಾಸಕ್ತಿಯೇ ಮುಖ್ಯ. ಇದಕ್ಕಾಗಿಯೇ ಬಿಜೆಪಿ ಎಸ್ ಡಿಪಿಐ ಸಂಘಟನೆಯ ಮೇಲೆ ನಿಷೇಧ ಹೇರುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದರು. 

ಡಿಜೆ ಹಳ್ಳಿ,ಕೆ. ಜೆ. ಹಳ್ಳಿ ಗಲಭೆ ಸಂಬಂಧ ಪಕ್ಷದ ರಾಜ್ಯಾಧ್ಯಕ್ಷರು ಆರು ಜನರ ತಂಡವನ್ನು ರಚಿಸಿದ್ದಾರೆ. ಡಾ. ಜಿ. ಪ ರಮೇಶ್ವರ್ ನೇತೃತ್ವದಲ್ಲಿ ತಂಡವು ಗಲಭೆಯ ಹಿಂದಿನ ಕಾರಣಗಳನ್ನು ತಿಳಿಯಬೇಕಿದೆ. ಪೊಲೀಸರು ಸಮರ್ಪಕ ವಾಗಿ ಕ್ರಮ ಕೈಗೊಳ್ಳಲು ಹಾಗೂ ಸಾರ್ವಜನಿಕರಿಗೆ ಆದ ನಷ್ಟವನ್ನು ಪರಿಶೀಲನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT