ಸಿದ್ದರಾಮಯ್ಯ, ಕೆ.ಎಸ್. ಈಶ್ವರಪ್ಪ 
ರಾಜಕೀಯ

ಈ ಜನ್ಮದಿನಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ- ಸಚಿವ ಕೆ.ಎಸ್.ಈಶ್ವರಪ್ಪ 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಜನ್ಮದಲ್ಲಿ ಮತ್ತೆ ಮುಖ್ಯ ಮಂತ್ರಿಯಾಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಜನ್ಮದಲ್ಲಿ ಮತ್ತೆ ಮುಖ್ಯ ಮಂತ್ರಿಯಾಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸುವ ಹುನ್ನಾರ ನಡೆಸಲಾಗುತ್ತಿದೆ ಎಂಬ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಬುಧವಾರ ವಿಧಾನಸೌಧದಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಈಶ್ವರಪ್ಪ, ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಕುರ್ಚಿ ಮೇಲೆ ವ್ಯಾಮೋಹ ಹೋಗಿಲ್ಲ.ಈ ಜನ್ಮದಲ್ಲಿ ಮತ್ತೆ ಮುಖ್ಯಮಂತ್ರಿಯಾಗುವುದಿಲ್ಲ.ಸಿದ್ದರಾಮಯ್ಯ ಹೇಳಿಕೆಯು ಬಾಲಿಶ ಹೇಳಿಕೆಯಾಗಿದೆ ಎಂದು ಟೀಕಾಪ್ರಹಾರ ನಡೆಸಿದರು.

ಬಿಜೆಪಿ-ಕೆಜೆಪಿ ಪರಿಣಾಮ ಸಿದ್ದರಾಮಯ್ಯ ಆಕಸ್ಮಿಕವಾಗಿ ಮುಖ್ಯಮಂತ್ರಿಯಾದರು.ಆ ಸ್ಥಾನವನ್ನು ಅವರು ಉಳಿಸಿಕೊಂಡಿಲ್ಲ.ಕಾಂಗ್ರೆಸ್ ಪಕ್ಷವನ್ನು ಮುಳುಗಿಸಿದರು.ಸಿದ್ದರಾಮಯ್ಯ ಅವಧಿಯಲ್ಲಿಯೇ ಗುಂಪುಗಾರಿಕೆ ಹೆಚ್ಚಾಗಿದೆ.ಅವರಿಂದಲೇ ಧರ್ಮಗಳ ನಡುವೆ ಗಲಭೆಗಳು ನಡೆಯುತ್ತಿದೆ ಎಂದರು. 

ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿಕೆಯು ಕಾಂಗ್ರೆಸ್ ಅವರಿಗೆ ನಾಚಿಕೆಯಾಗಬೇಕು. ನಮ್ಮ ನಾಯಕರು ಯಾರು ನನ್ನ ಬೆಂಬಲಕ್ಕೆ ಬಂದಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡರು.ಡಿ.ಜೆ.ಹಳ್ಳಿಯಲ್ಲಿ ನಡೆದಿರುವ ಘಟನೆಯು ಕೋಮುಗಲಭೆಯಲ್ಲ,ಅದು ಮತಾಂಧರ ದೊಂಬಿ.ಈ ಘಟನೆಯನ್ನು ಕಾಂಗ್ರೆಸ್ ಖಂಡಿಸಿಲ್ಲ ಎಂದು ಅವರು ಹರಿಹಾಯ್ದರು.    
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?