ರಾಜಕೀಯ

ತಳಸಮುದಾಯದ ಅಭಿವೃದ್ಧಿಗೆ ರಾಜಕೀಯ ಇಚ್ಛಾಶಕ್ತಿ ತೋರಿದವರು ಅರಸು: ಎಚ್.ಡಿ.ಕುಮಾರಸ್ವಾಮಿ

Shilpa D

ಬೆಂಗಳೂರು: ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಅವರ ಕಾರ್ಯ ವೈಖರಿ ಅನುಕರಣೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೇವರಾಜ ಅರಸು ಅವರ ಜನ್ಮದಿನದ ಪ್ರಯುಕ್ತ ಅರಸು ಅವರ ಸೇವೆಯನ್ನು ಸ್ಮರಿಸಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ತಮಗೆ ದಕ್ಕಿದ ರಾಜಕೀಯ ಪರಮಾಧಿಕಾರವನ್ನು ತಳಸಮುದಾಯದ ಅಭಿವೃದ್ಧಿಗೆ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿದ ಅರಸು ಕಾರ್ಯ ವೈಖರಿ ಅನುಕರಣೀಯವೆಂದಿದ್ದಾರೆ. 

ಶೋಷಿತ ಸಮುದಾಯಕ್ಕೆ ನ್ಯಾಯ ಒದಗಿಸುವ ಭರದಲ್ಲಿ ಇತರ ಸಮುದಾಯಗಳ ಮೇಲೆ ಸವಾರಿ ಮಾಡದ ರಾಜಕೀಯ ಸೂಕ್ಷ್ಮ ಪ್ರಜ್ಞೆ ಅರಸು ಅವರಲ್ಲಿ ನಾನು ಕಂಡಿದ್ದೇನೆ. ಸಾಮಾಜಿಕ, ಆರ್ಥಿಕ ಸುಧಾರಣೆಗಳ ಹರಿಕಾರ ಅರಸು ಸದಾ ಸ್ಮರಣೀಯರು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕರ್ನಾಟಕ ನಾಮಕರಣ, ಹಾವನೂರು ಕಮಿಷನ್, ಭೂ ಸುಧಾರಣೆ, ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿರ್ಮೂಲನೆ ಹಾಗೂ ಶೋಷಿತ ಸಮುದಾಯಕ್ಕೆ  ರಾಜಕೀಯ
ಆಸರೆ ಒದಗಿಸಿದ ಮಹಾನ್ ನಾಯಕ  ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭದಲ್ಲಿ ವಿನಮ್ರವಾಗಿ  

SCROLL FOR NEXT