ಸಾಂದರ್ಭಿಕ ಚಿತ್ರ 
ರಾಜಕೀಯ

'ಆಕ್ಸಿಜನ್ ಪೂರೈಸಲು ಏದುರಿಸಿರು ಬಿಡುತ್ತಿರುವ ಸರ್ಕಾರ ರೈತರು ಹಿಡಿಶಾಪ ಹಾಕುವ ಮುನ್ನ ಎಚ್ಚೆತ್ತುಕೊಳ್ಳಲಿ'

ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಗೊಬ್ಬರ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸಿದಂತೆ ತುರ್ತು ಸೂಕ್ತ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಬೆಂಗಳೂರು: ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಗೊಬ್ಬರ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸಿದಂತೆ ತುರ್ತು ಸೂಕ್ತ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ವಾಡಿಕೆಗಿಂತ ಈ ಬಾರಿ ರಾಜ್ಯಾದ್ಯಂತ ಶೇಕಡ 25ರಷ್ಟು ಹೆಚ್ಚು ಬಿತ್ತನೆ ಆಗಿದೆ. ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕೆಂದು ಪ್ರಶ್ನಿಸಿ ಅವರು ಟ್ವೀಟ್ ಮಾಡಿದ್ದಾರೆ. 

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರದ ಕೊರತೆ ಎದುರಾಗಿದ್ದು, ಗೊಬ್ಬರ ಸಿಗದೆ ರೈತರು ಹಿಡಿಶಾಪ ಹಾಕುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಅತಿವೃಷ್ಟಿಯಿಂದ ತೊಂದರೆಗೆ ಸಿಲುಕಿರುವ ರೈತರಿಗೆ ಸರ್ಕಾರ ಸಹಾಯ ಮಾಡಬೇಕು ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವುದಕ್ಕೆ ಸರ್ಕಾರ ಏದುಸಿರು ಬಿಡುತ್ತಿದೆ‌. ಈಗ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಎಚ್ಚರಿಕೆ
ನೀಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!