ರಾಜಕೀಯ

ಗಲಭೆ ಹಿಂದೆ ಕಾಂಗ್ರೆಸ್ ಕೈವಾಡ ಎಂಬಂತೆ ಬಿಂಬಿಸಲು ಬಿಜೆಪಿ ಪೊಲೀಸರ ಮೇಲೆ ಒತ್ತಡ ಹೇರಿದೆ: ಡಿಕೆ ಶಿವಕುಮಾರ್ ಗಂಭೀರ ಆರೋಪ

Raghavendra Adiga

ಬೆಂಗಳೂರು: ಡಿಜೆ ಹಳ್ಳಿ ಹಿಂಸಾಚಾರದಲ್ಲಿ ಕಾಂಗ್ರೆಸ್ ಮುಖಂಡರ ಹೆಸರನ್ನು ಸೇರಿಸುವಂತೆ ಆಡಳಿತಾರೂಢ ಬಿಜೆಪಿ ನಾಯಕರು ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುರುವಾರ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ತನಿಖೆಯ ಸಮಯದಲ್ಲಿ ಯಾವುದೇ ಒತ್ತಡಕ್ಕೆ ಒಳಗಾಗದಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಕೋವಿಡ್ -19 ಬಿಕ್ಕಟ್ಟು, ಪ್ರವಾಹ ಪರಿಸ್ಥಿತಿ ಮತ್ತು ಭೂ ಸುಧಾರಣಾ ಕಾಯ್ದೆಯ ತಿದ್ದುಪಡಿಗಳನ್ನು ನಿಭಾಯಿಸುವ ಬಗ್ಗೆ ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿದ ಶಿವಕುಮಾರ್, ಪೊಲೀಸ್ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ  ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಹಾಗಗದೆ ಹೋದಲ್ಲಿ ಕಾಂಗ್ರೆಸ್ ಪೊಲೀಸ್ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಲಿದೆ ಎಂದರು.

“ಹಿಂಸಾಚಾರಕ್ಕೆ ಕಾಂಗ್ರೆಸ್ ಕಾರಣವಲ್ಲ. ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಮತ್ತು ಈಗ ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳಲು ಅವಕಾಶ ಮಾಡಿಕೊಡಿ ಮತ್ತು ಪಕ್ಷದ ಹೆಸರು  ಕೆಡಿಸಲು ಪ್ರಯತ್ನಿಸಬಾರದು, ”ಎಂದು ಅವರು ಹೇಳಿದರು. ಸರ್ಕಾರದ ವಿರುದ್ಧ ಪಕ್ಷದ ಪ್ರತಿಭಟನೆಯಲ್ಲಿ ಶಿವಕುಮಾರ್, ಸರ್ಕಾರದಿಂದ ಉತ್ತಮ ಆಡಳಿತವನ್ನು ಕೋರಿ ಕಾಂಗ್ರೆಸ್ ಪಕ್ಷವು ಜನರ ಪರವಾಗಿ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು

ಬಿಜೆಪಿ ತಿರುಗೇಟು

ಕಾಂಗ್ರೆಸ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ದಲಿತರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಗುರುವಾರ ಹೇಳಿದ್ದಾರೆ. "ಇಲ್ಲಿಯವರೆಗೆ, ಸಿದ್ದರಾಮಯ್ಯ ಅವರು ದಲಿತ ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ ಅವರ ನಿವಾಸಕ್ಕೆ ಭೇಟಿ ನೀಡಿಲ್ಲ, ಅವರ ಮನೆಯನ್ನು ಎಸ್‌ಡಿಪಿಐ ಕಾರ್ಯಕರ್ತರು ಧ್ವಂಸ ಮಾಡಿದ್ದಾರೆ. " ಎಂದು ಅವರು ಹೇಳಿದರು. ಎಸ್‌ಡಿಪಿಐ ಜೊತೆ ಕಾಂಗ್ರೆಸ್ ಸಂಬಂಧ ಹೊಂದಿದೆ  ಎಂದು ಆರೋಪಿಸಿದ ಅವರು, ಎಸ್‌ಡಿಪಿಐ ಅಭ್ಯರ್ಥಿ ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಸಹಾಯ ಮಾಡಿದೆ ಎಂದು ಹೇಳಿದರು.

SCROLL FOR NEXT