ಸಿ.ಎಂ.ಇಬ್ರಾಹಿಂ 
ರಾಜಕೀಯ

ಜಾತಿ, ಧರ್ಮದ ವೈರಸ್ ಅಂಟಿದವರು ಟಿಪ್ಪುವನ್ನು ವಿರೋಧಿಸುತ್ತಾರೆ: ಹೆಚ್.ವಿಶ್ವನಾಥ್ ಹೇಳಿಕೆಗೆ ಸಿ.ಎಂ.ಇಬ್ರಾಹಿಂ ಬೆಂಬಲ

ಹೃದಯ ವೈಶಾಲ್ಯವುಳ್ಳವರಿಗೆ ಟಿಪ್ಪು ಉತ್ತಮನೂ, ಜಾತಿ ಧರ್ಮದ ವೈರಸ್ ಅಂಟಿದವರಿಗೆ ಟಿಪ್ಪು ವಿರೋಧಿಯಾಗಿಯೂ ಕಾಣುತ್ತಾನೆ ಎಂದು ಕಾಂಗ್ರೆಸ್ ಮುಖಂಡ ಸಿ‌.ಎಂ.ಇಬ್ರಾಹಿಂ ಹೇಳಿದ್ದಾರೆ.

ಬೆಂಗಳೂರು: ಹೃದಯ ವೈಶಾಲ್ಯವುಳ್ಳವರಿಗೆ ಟಿಪ್ಪು ಉತ್ತಮನೂ, ಜಾತಿ ಧರ್ಮದ ವೈರಸ್ ಅಂಟಿದವರಿಗೆ ಟಿಪ್ಪು ವಿರೋಧಿಯಾಗಿಯೂ ಕಾಣುತ್ತಾನೆ ಎಂದು ಕಾಂಗ್ರೆಸ್ ಮುಖಂಡ ಸಿ‌.ಎಂ.ಇಬ್ರಾಹಿಂ ಹೇಳಿದ್ದಾರೆ.

ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ, ಮೈಸೂರಿನವರಾದ ಹೆಚ್.ವಿಶ್ವನಾಥ್ ಪುಸ್ತಕ ಬರೆದವರು, ಇತಿಹಾಸ ಅರಿತವರು. ವಿಶ್ವನಾಥ್ ಯಾವ ಪಕ್ಷದಲ್ಲಿದ್ದಾರೆ ಎನ್ನುವುದೀಗ ಮುಖ್ಯವಲ್ಲ‌. ಯಡಿಯೂರಪ್ಪನವರೇ ಟಿಪ್ಪುವನ್ನು ಹಾಡಿ ಹೊಗಳಿದ್ದಾರೆ. ರಾಷ್ಟ್ರಪತಿಗಳು ಸಹ ಟಿಪ್ಪು ಗುಣಗಾನ ಮಾಡಿದ್ದರು. ಟಿಪ್ಪುವನ್ನು ಕಾಂಗ್ರೆಸ್‌ನ ವೋಟ್ ಬ್ಯಾಂಕ್ ಎಂದು ಬಿಜೆಪಿಗರು ದೂರುತ್ತಿದ್ದರು. ಶೃಂಗೇರಿ ಶ್ರೀಗಳ ಬಳಿಯೇ ಟಿಪ್ಪು ಬಗ್ಗೆ ಕೇಳಿದರೆ ಹೇಳುತ್ತಾರೆ. ನಂಜನಗೂಡು ದೇಗುಲದ ಬಗ್ಗೆ ಟಿಪ್ಪು ಹೇಗೆ ನಡೆದುಕೊಂಡಿದ್ದ ಎನ್ನುವುದು ಗೊತ್ತಾಗುತ್ತದೆ. ನಂಜನಗೂಡಿನ ಶ್ರೀಕಂಠೇಶ್ವರನಿಗೆ ಇಂದಿಗೂ ಟಿಪ್ಪು ಕೊಟ್ಟ ಪಚ್ಚೆವಜ್ರಕ್ಕೆ ಮಂಗಳಾರತಿ ನಡೆಯುತ್ತದೆ. ಶೃಂಗೇರಿಯಲ್ಲಿ ಸಾವಿರಾರು ಬ್ರಾಹ್ಮಣರ ಊಟಕ್ಕೆ ಟಿಪ್ಪು ಖಜಾನೆಯಿಂದಲೇ ಹಣ ಹೋಗುತ್ತಿತ್ತು. ಮಲಗಿದವರನ್ನು ಎಬ್ಬಿಸಬಹುದು. ಆದರೆ ಸುಮ್ಮನೆ ಕಣ್ಣು ಮುಚ್ಚಿಕುಳಿತವರನ್ನು ಎಬ್ಬಿಸುವುದು ಕಷ್ಟ. ವಿಶ್ವನಾಥ್ ಅವರು ಇರುವ ಸತ್ಯವನ್ನು ಹೊರಗೆ ಹಾಕಿದ್ದಾರೆ. ಯಾವುದೇ ಭಯವಿಲ್ಲದೇ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮಾರ್ಮಿಕವಾಗಿ‌ ನುಡಿದರು.

ಹುತಾತ್ಮರಾದವರನ್ನು ಏಕೆ ವಿರೋಧಿಸಬೇಕು. ಯಾವುದೋ ಕಾಯಿಲೆ ಬಂದು ಟಿಪ್ಪು ಸತ್ತಿದ್ದರೆ ಹುತಾತ್ಮರಾಗುತ್ತಿರಲಿಲ್ಲ. ಆದರೆ ಬ್ರಿಟಿಷರ ವಿರುದ್ಧದ ಹೋರಾಟದಿಂದ ಅವರು ವೀರ ಮರಣವನ್ನು ಅಪ್ಪಿದ್ದಾರೆ. ಟಿಪ್ಪು ವಿಚಾರದಲ್ಲಿ ಬಿಜೆಪಿ‌ ಮತ್ತೆ ರಾಜಕೀಯ ಮಾಡುವುದು ಬೇಡ ಎಂದು ಆಗ್ರಹಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!