ದಿನೇಶ್ ಗುಂಡೂರಾವ್ 
ರಾಜಕೀಯ

ದೇಶದಲ್ಲಿ ಕೊರೊನಾ ಏರಿಕೆಗೆ ಗಂಟೆ ಬಾರಿಸಿ ಚಪ್ಪಾಳೆ ತಟ್ಟಿದ್ದೇ ಕಾರಣ: ದಿನೇಶ್ ಗುಂಡೂರಾವ್

ಕೊರೊನಾ ಏರಿಕೆಯಲ್ಲಿ ಭಾರತ ಇಡೀ ವಿಶ್ವದಲ್ಲಿ ಎರಡನೇ ಸ್ಥಾನಕ್ಕೇರಿದ್ದು, ಇದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಗಂಟೆ ಬಾರಿಸಿ, ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ಜನರನ್ನು ಭಾವನಾತ್ಮಕವಾಗಿ‌ ಮೋಸಗೊಳಿಸಿದ್ದರ ಪರಿಣಾಮವೇ ಕಾರಣ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ಬೆಂಗಳೂರು: ಕೊರೊನಾ ಏರಿಕೆಯಲ್ಲಿ ಭಾರತ ಇಡೀ ವಿಶ್ವದಲ್ಲಿ ಎರಡನೇ ಸ್ಥಾನಕ್ಕೇರಿದ್ದು, ಇದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಗಂಟೆ ಬಾರಿಸಿ, ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ಜನರನ್ನು ಭಾವನಾತ್ಮಕವಾಗಿ‌ ಮೋಸಗೊಳಿಸಿದ್ದರ ಪರಿಣಾಮವೇ ಕಾರಣ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ವಿಶ್ವದಲ್ಲೇ ಮೊದಲನೇ ಸ್ಥಾನಕ್ಕೆ ಭಾರತ ಏರುವುದು ನಿಸ್ಸಂದೇಹವಾಗಿದ್ದು, ಬಿಜೆಪಿ ಘೋಷಿತ 'ವಿಶ್ವಗುರು'ಗಳ ಬತ್ತಳಿಕೆಯಲ್ಲಿ ಕೊರೊನಾ ಸದ್ದಡಗಿಸಲು ಇನ್ಯಾವ ಅಸ್ತ್ರಗಳಿದ್ದಾವೋ? ಎಂದು ಲೇವಡಿ ಮಾಡುವ ಮೂಲಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ಅಲ್ಲದೆ "ಕೆಲುವು ದಿನಗಳಲ್ಲಿ ವಿಶ್ವದಲ್ಲೇ ೧ನೆ ಸ್ಥಾನಕ್ಕೆ ಭಾರತ ಏರುವುದು ನಿಸ್ಸಂದೇಹ. ಜನಸಂಖ್ಯೆ ಹೆಚ್ಚಿರುವುದರಿಂದ ಇದು ಆಶ್ಚರ್ಯಕರ ಸಂಗತಿ ಅಲ್ಲ. ಆದ್ರೆ ನೆರ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ವೈಫಲ್ಯ ಸ್ಪಷ್ಟವಾಗುತ್ತದೆ.

"ಪಾಕಿಸ್ತಾನ,ಬಾಂಗ್ಲಾದೇಶ,ನೇಪಾಳ,ಬರ್ಮಾ,ಶ್ರೀಲಂಕಾ,ಅಫಘಾನಿಸ್ತಾ,ಭೂತಾನ್,ಚೀನಾ ನಮಗಿಂತ ಉತ್ತಮ ಸ್ಥಿತಿಯಲ್ಲಿದ್ದಾರೆ." ಎಂದೂ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT