ಸದನದಲ್ಲಿ ಮಾತನಾಡುತ್ತಿರುವ ಸಚಿವ ಮಾಧುಸ್ವಾಮಿ 
ರಾಜಕೀಯ

ನಾಲ್ಕೇ ದಿನಕ್ಕೆ ಅಧಿವೇಶನ ಅಂತ್ಯ: ಗುರುವಾರ ವಿಧಾನಸಭೆ ಕಲಾಪ ಮುಕ್ತಾಯಗೊಳಿಸಲು ತೀರ್ಮಾನ

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ವಿಧಾನಸಭೆಯ ಕಲಾಪವನ್ನು ಇದೇ ಡಿಸೆಂಬರ್ 10, ಗುರುವಾರಕ್ಕೆ ಅಂತ್ಯಗೊಳಿಸಲು ಕಲಾಪ ಸಲಹಾ ಸಮಿತಿ ಮಂಗಳವಾರ ತೀರ್ಮಾನಿಸಿದೆ.

ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ವಿಧಾನಸಭೆಯ ಕಲಾಪವನ್ನು ಇದೇ ಡಿಸೆಂಬರ್ 10, ಗುರುವಾರಕ್ಕೆ ಅಂತ್ಯಗೊಳಿಸಲು ಕಲಾಪ ಸಲಹಾ ಸಮಿತಿ ಮಂಗಳವಾರ ತೀರ್ಮಾನಿಸಿದೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ ಇಂದು ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ನಿನ್ನೆಯಿಂದ ಆರಂಭವಾಗಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೆ ಕಲಾಪದ ಮೊದಲ ದಿನವೇ ಸದನದಲ್ಲಿ ಖುರ್ಚಿಗಳು ಖಾಲಿ ಖಾಲಿಯಾಗಿದ್ದವು. ಹಲವು ಸಚಿವರು, ಆಡಳಿತ ಹಾಗೂ ವಿಪಕ್ಷಗಳ ಅನೇಕ ಸದಸ್ಯರು ಸದನಕ್ಕೆ ಗೈರು ಹಾಜರಾಗಿದ್ದರು.

ಡಿಸೆಂಬರ್ 15ರ ವರೆಗೆ ಅಧಿವೇಶನ ನಡೆಯಬೇಕಿತ್ತು. ಆದರೆ ಗ್ರಾಮ ಪಂಚಾಯ್ತಿ ಚುನಾವಣೆ ಹಾಗೂ ಕೊರೋನಾ ಹಿನ್ನೆಲೆಯಲ್ಲಿ ಅಧಿವೇಶನವನ್ನು ನಾಲ್ಕೇ ದಿನಕ್ಕೆ ಮುಕ್ತಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಶೇ. 7.5 ರಷ್ಟು ಮೀಸಲಾತಿ – ಕರಡು ನಿಯಮ ಪ್ರಕಟ

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!