ರಾಜಕೀಯ

ಸಂಪುಟ ವಿಸ್ತರಣೆ ವಿಳಂಬ: ಅಸಮಾಧಾನಿತ ಶಾಸಕರಿಗೆ ಸಿಎಂ ಯಡಿಯೂರಪ್ಪ ಬಂಪರ್ ಗಿಫ್ಟ್

Manjula VN

ಬೆಂಗಳೂರು: ಕಳೆದೊಂದು ವರ್ಷದಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಕಷ್ಟು ಕಸರತ್ತುಗಳನ್ನು ನಡೆಸುತ್ತಲೇ ಇದ್ದರೂ ಅದು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸಿಗದ ಕಾರಣ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಸಲು ಆಗುತ್ತಿಲ್ಲ. ಹೀಗಾಗಿ ಅಸಮಾಧಾನಗೊಂಡಿರುವ ಶಾಸಕರಿಗೆ ಯಡಿಯೂರಪ್ಪ ಅವರು ಬಂಪರ್ ಗಿಫ್ಟ್ ನೀಡಿದ್ದಾರೆ. 

13 ಮಂದಿ ಬಿಜೆಪಿ ಶಾಸಕರಿಗೆ ಸಂಪುಟ ದರ್ಜೆಯ ನಿಗಮ ಮಂಡಳಿ ಸ್ಥಾನ ಹಾಗೂ ನಾಲ್ವರಿಗೆ ರಾಜ್ಯ ದರ್ಜೆಯ ಸ್ಥಾನಮಾನವನ್ನು ನೀಡುವಂತೆ ಆದೇಶಿಸಿದ್ದಾರೆ. 

ಸಂಪುಟ ಸಭೆಯಲ್ಲಿ ಯಾವುದೇ ಸ್ಥಾನಮಾನ ಲಭ್ಯವಾಗದ ಬಿಜೆಪಿ ಶಾಸಕರನ್ನು ಗುರುತಿಸುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು, 13 ಶಾಸಕರನ್ನು ರಾಜ್ಯ ಆಡಳಿತ ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಈ ಶ್ರೇಣಿಯು ಕ್ಯಾಬಿನೆಟ್ ಮಂತ್ರಿಯ ಸ್ಥಾನಕ್ಕೆ ಸಮನಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಈ ನಡುವೆ 14ನೇ ನೇಮಕಾತಿಯಾಗಿ ನಿವೃತ್ತ ಮಾಹಿತಿ ವಿಭಾಗದ ಅಧಿಕಾರಿಯೊಬ್ಬರನ್ನು ಸಿಎಂ ಅವರ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿರುವುದು ವಿಶೇಷ. ಕ್ಯಾಬಿನೆಟ್ ಶ್ರೇಣಿಯೊಂದಿಗೆ ಇತರ ನಾಲ್ವರು ಶಾಸಕರನ್ನು ಇತರ ಮಂಡಳಿಗಳು ಮತ್ತು ನಿಗಮಗಳಿಗೆ ನೇಮಕ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
 
ಎನ್ ಭೃಂಗೇಶ್ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. 

SCROLL FOR NEXT